​ಜೂ.25ಕ್ಕೆ ಕುಂದಾಪುರದಲ್ಲಿ ಉದ್ಯೋಗ ಮೇಳ

Update: 2022-06-02 15:38 GMT

ಉಡುಪಿ, ಜೂ.2: ಜಿಲ್ಲಾಡಳಿತ, ಜಿಪಂ, ಜಿಲ್ಲಾ ಕೌಶಲ್ಯ ಮಿಷನ್, ಜಿಲ್ಲಾ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಎನ್‌ಯುಎಲ್‌ಎಂ/ ಎನ್‌ಆರ್‌ಎಲ್‌ಎಂ, ಉದ್ಯೋಗ ವಿನಿಮಯ ಕಛೇರಿ ಉಡುಪಿ ಮತ್ತು ಭಂಡಾರ್ಕಾರ್ಸ್ ಕಾಲೇಜು ಕುಂದಾಪುರ ಇವರ ಸಹಯೋಗ ದೊಂದಿಗೆ ಹೃಹತ್ ಉದ್ಯೋಗ ಮೇಳವೊಂದು ಜೂನ್ 25ರಂದು ಬೆಳಗ್ಗೆ 9:30ರಿಂದ ಕುಂದಾಪುರ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ನಡೆಯಲಿದೆ.

ಉದ್ಯೋಗ ಮೇಳದಲ್ಲಿ ವಿವಿಧ ಕಂಪೆನಿ, ಸಂಸ್ಥೆಗಳು ಭಾಗವಹಿಸಿ ತಮ್ಮ ಸಂಸ್ಥೆಗಳಲ್ಲಿ ಖಾಲಿ ಇರುವ ಉದ್ಯೋಗಗಳಿಗೆ ನೇಮಕಾತಿ ಮಾಡಿಕೊಳ್ಳಲಿವೆ. ಎಸೆಸೆಲ್ಸಿ, ಪಿಯುಸಿ, ಯಾವುದೇ ಪದವಿ, ಡಿಪ್ಲೋಮಾ, ಐಟಿಐ, ಸ್ನಾತಕೋತ್ತರ ಪದವಿ ಹಾಗೂ ವಿವಿಧ ವಲಯಕ್ಕೆ ಸಂಬಂಧಿಸಿದ ಅಭ್ಯರ್ಥಿಗಳು - https://udupi.nic.in-ನಲ್ಲಿ ನೋಂದಣಿ ಮಾಡಿಕೊಂಡು, ವಿದ್ಯಾರ್ಹತೆಯ ಅಂಕಪಟ್ಟಿ, 3 ರೆಸ್ಯೂಮ್ (ಸ್ವ- ವಿವರ) ಹಾಗೂ ಆಧಾರ್ ಕಾರ್ಡ್ ಪ್ರತಿ ಇತ್ಯಾದಿ ದಾಖಲೆಗಳೊಂದಿಗೆ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಳಿಗೆ ಮೊ.ನಂ: 9945856670, 9901481729, 9483772449, 9449943882, 9739691294, 9443409355 ಅನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News