ಜೂ.4ಕ್ಕೆ ಕೆಮ್ತೂರಿನಲ್ಲಿ ವೈಜ್ಞಾನಿಕ ಕೃಷಿ ಮತ್ತು ಹೈನುಗಾರಿಕೆ ಮಾಹಿತಿ
ಉಡುಪಿ, ಜೂ.2: ಉಡುಪಿ ಜಿಲ್ಲಾ ಕೃಷಿಕ ಸಂಘ ಮತ್ತು ಕೊರಂಗ್ರಪಾಡಿ ಸಹಕಾರಿ ವ್ಯವಸಾಯಿಕ ಸಂಘ ಕುಕ್ಕಿಕಟ್ಟೆ ಆಯೋಜಿಸಿರುವ ವೈಜ್ಞಾನಿಕ ಕೃಷಿ ಮತ್ತು ಹೈನುಗಾರಿಕೆ ಮಾಹಿತಿ ಕಾರ್ಯಕ್ರಮ ಕೆಮ್ತೂರು ಬ್ರಹ್ಮಶ್ರೀ ನಾರಾಯಣಗುರು ಸಮುದಾಯ ಭವನದಲ್ಲಿ ಜೂ.4ರ ಶನಿವಾರ ಬೆಳಿಗ್ಗೆ 10 ಗಂಟೆಗೆ ನಡೆಯಲಿದೆ.
ಕೆಮ್ತೂರು ಸುಂದರ ಶೆಟ್ಟಿ ಉದ್ಘಾಟಿಸಲಿರುವ ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಉಡುಪಿ ಜಿಲ್ಲಾ ಸಹಕಾರಿ ಸಂಘಗಳ ಯೂನಿಯನ್ ಅಧ್ಯಕ್ಷ ಬಿ. ಜಯಕರ ಶೆಟ್ಟಿ ಇಂದ್ರಾಳಿ ವಹಿಸಲಿದ್ದಾರೆ. ಅತಿಥಿಗಳಾಗಿ ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಮೋಹನ್‌ರಾಜ್, ಕೊರಂಗ್ರಪಾಡಿ ಸ.ವ್ಯ.ಸಂಘದ ಅಧ್ಯಕ್ಷ ಹರೀಶ್ ಶೇರಿಗಾರ್ ಅಲೆವೂರು ಭಾಗವಹಿಸಲಿದ್ದಾರೆ.
ಸಂಪನ್ಮೂಲ ವ್ಯಕ್ತಿಗಳಾಗಿ ಉಡುಪಿ ಜಿಲ್ಲಾ ಕೃಷಿಕ ಸಂಘದ ಅಧ್ಯಕ್ಷ ರಾಮಕೃಷ್ಣ ಶರ್ಮ ಬಂಟಕಲ್ಲು, ಪ್ರಧಾನ ಕಾರ್ಯದರ್ಶಿ ಕುದಿ ಶ್ರೀನಿವಾಸ ಭಟ್ ಹಾಗೂ ಪಶುಪಾಲನಾ ಮತ್ತು ಪಶು ವೈದ್ಯಕೀಯ ಇಲಾಖೆ ನಿವೃತ್ತ ಉಪನಿರ್ದೇಶಕ ಡಾ. ಸರ್ವೋತ್ತಮ ಉಡುಪ ಭಾಗವಸಲಿದ್ದಾರೆ.
ಕೆಮ್ತೂರು ಪ್ರದೇಶದ ಹತ್ತು ಮಂದಿ ಪ್ರಗತಿಪರ ಕೃಷಿಕರು ಮತ್ತು ಹೈನುಗಾರರನ್ನು ಕೂಡ ಇದೇ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಗುವುದು.
ವೈಜ್ಞಾನಿಕವಾಗಿ ಕಡಿಮೆ ಖರ್ಚಿನಲ್ಲಿ ಲಾಭದಾಯಕವಾಗಿ ಕೃಷಿ ಮಾಡುವ ಸುಲಭ ಕ್ರಮಗಳು, ರೋಗ ಕೀಟ ನಿರ್ವಹಣೆ, ಪಶುಪಾಲನೆ ಕುರಿತು ಮಾಹಿತಿ ಹಾಗೂ ಮಾರ್ಗದರ್ಶನ ನೀಡುವ ಈ ಕಾರ್ಯಕ್ರಮದಲ್ಲಿ ಕೃಷಿಕರು, ಕೃಷಿ ಆಸಕ್ತರು ಭಾಗವಹಿಸುವಂತೆ ಕೃಷಿಕ ಸಂಘದ ಪ್ರಕಟಣೆ ತಿಳಿಸಿದೆ.