ಬ್ಯಾಂಕ್ ಸೌಲಭ್ಯ ಬಳಕೆ ಬಗ್ಗೆ ಜಾಗೃತಿ ಅಗತ್ಯ: ಬಾಬು ಎಂ.
ಉಡುಪಿ : ಸರಕಾರದ ಎಲ್ಲಾ ಯೋಜನೆಗಳ ಹಣಕಾಸು ನೆರವು ನೇರವಾಗಿ ಫಲಾನುಭವಿಗಳ ಬ್ಯಾಂಕ್ ಖಾತೆ ಜಮೆ ಮಾಡಲಾಗುತ್ತಿದೆ. ಆದ್ದರಿಂದ ಬ್ಯಾಂಕ್ ಸೌಲಭ್ಯ ಬಳಕೆ ಕುರಿತು ಜನರಿಗೆ ಮಾಹಿತಿ ನೀಡಿದಲ್ಲಿ ಆರ್ಥಿಕ ಅಭಿವೃದ್ಧಿ ಸಾಧಿಸಬಹುದು. ಈ ಬಗ್ಗೆ ಜಾಗೃತಿ ಮೂಡಿಸುವುದರಿಂದ ಹಣದ ವಿಚಾರದಲ್ಲಿ ಮೋಸ ಹೋಗುವುದನ್ನು ತಪ್ಪಿಸಬಹುದು ಎಂದು ಉಡುಪಿ ಜಿಪಂ ಯೋಜನಾ ನಿರ್ದೇಶಕ ಬಾಬು ಎಂ. ತಿಳಿಸಿದ್ದಾರೆ.
ಬ್ರಹ್ಮಾವರ ರುಡ್‌ಸೆಟ್ ಸಂಸ್ಥೆಯಲ್ಲಿ ನಡೆದ ಆರ್ಥಿಕ ಸಾಕ್ಷರತಾ ಸಮುದಾಯ ಸಂಪನ್ಮೂಲ ವ್ಯಕ್ತಿಗಳ ತರಬೇತಿಯ ಸಮಾರೋಪ ಸಮಾರಂಭದಲ್ಲಿ ಶಿಬಿರಾರ್ಥಿ ಗಳಿಗೆ ಟೂಲ್ ಕಿಟ್ ಹಾಗೂ ಪ್ರಮಾಣ ಪತ್ರ ವಿತರಿಸಿ ಅವರು ಮಾತನಾಡು ತ್ತಿದ್ದರು.
ಕೆನರಾ ಬ್ಯಾಂಕ್ ಪ್ರಾದೇಶಿಕ ಕಛೇರಿಯ ಸಹಾಯಕ ಮಹಾಪ್ರಬಂಧಕ ಸಂಜೀವ್ ಕುಮಾರ್ ಮಾತನಾಡಿದರು. ವಿಭಾಗೀಯ ಪ್ರಬಂಧಕ ಅವಿನಾಶ್, ಎನ್‌ಎಲ್‌ಆರ್‌ಎಂ ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕ ಪ್ರಭಾಕರ್ ಆಚಾರ್, ಜಿಲ್ಲಾ ವ್ಯವಸ್ಥಾಪಕ ನವ್ಯಾ ಉಪಸ್ಥಿತರಿದ್ದರು. ರುಡ್‌ಸೆಟ್ ನಿರ್ದೇಶಕ ಲಕ್ಷ್ಮೀಶ್ ಸ್ವಾಗತಿಸಿದರು. ಉಪನ್ಯಾಸಕ ಸಂತೋಷ್ ಶೆಟ್ಟಿ ವಂದಿಸಿದರು. ಹಿರಿಯ ಉಪನ್ಯಾಸಕ ಕರು ಣಾಕರ್ ಜೈನ್ ಕಾರ್ಯಕ್ರಮ ನಿರೂಪಿಸಿದರು.