ರೈತ ಉತ್ಪಾದಕ ಸಂಸ್ಥೆಗಳಿಗೆ ಏಕರೂಪದ ಬ್ರಾಂಡ್ ರೂಪಿಸುವ ಸ್ಪರ್ಧೆ

Update: 2022-06-08 14:54 GMT

ಉಡುಪಿ, ಜೂ.೮: ಜಲಾಯನ ಅಭಿವೃದ್ಧಿ ಇಲಾಖೆ ಬೆಂಗಳೂರು ವತಿಯಿಂದ ರಾಜ್ಯದ ರೈತ ಉತ್ಪಾದಕ ಸಂಸ್ಥೆಗಳ ಮೂಲಕ ಸಣ್ಣ ಮತ್ತು ಅತೀ ಸಣ್ಣ ರೈತರನ್ನು ಒಗ್ಗೂಡಿಸಿ ಅವರ ಉತ್ಪನ್ನಗಳಿಗೆ ವಿಶಿಷ್ಟ ಹಾಗೂ ವಿನೂತನವಾದ ಏಕರೂಪದ ಬ್ರ್ಯಾಂಡಿಂಗ್ ಅನ್ನು ವಿನ್ಯಾಸಗೊಳಿಸಿ, ನೇರವಾಗಿ ಗ್ರಾಹಕರಿಗೆ ತಲುಪಿಸುವ ಸಲುವಾಗಿ ರೈತ ಉತ್ಪಾದಕ ಸಂಸ್ಥೆಗಳಿಗೆ ಏಕರೂಪ ಬ್ರಾಂಡ್ ರೂಪಿಸುವ ಸ್ಪರ್ಧೆಯನ್ನು ಆಯೋಜಿಸಲಾಗಿದ್ದು, ರೈತರು, ಗ್ರಾಹಕರು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಸ್ಪರ್ಧೆಯಲ್ಲಿ ಭಾಗವಹಿಸಬಹುದಾಗಿದೆ.

ಅತ್ಯುತ್ತಮ ಬ್ರಾಂಡ್, ವಿಶಿಷ್ಟ ಅಡಿ ಬರಹ ಹಾಗೂ ಆಕರ್ಷಕವಾದ ಲೋಗೋಗಳಿಗೆ ಪ್ರಥಮ ೭೫,೦೦೦ ರೂ., ದ್ವಿತೀಯ ೫೦,೦೦೦ ಹಾಗೂ ತೃತೀಯ ೨೫,೦೦೦ ರೂ. ನಗದು ಬಹುಮಾನ ಹಾಗೂ ಪ್ರಮಾಣ ಪತ್ರ ನೀಡಲಾಗುವುದು.

ಸ್ಪರ್ಧೆಯಲ್ಲಿ ಭಾಗವಹಿಸಲು ಜೂನ್ ೧೧ ಕೊನೆಯ ದಿನ. ಹೆಚ್ಚಿನ ಮಾಹಿತಿ ಗಾಗಿ  ವೆಬ್‌ಸೈಟ್ -https://challenge.coefpo.org/- ಅಥವಾ ಜಂಟಿ ಕೃಷಿ ನಿರ್ದೇಶಕರ ಕಛೇರಿ, ಉಡುಪಿ ಇವರನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News