ಪ್ರಧಾನಮಂತ್ರಿ ಮತ್ಸ್ಯಸಂಪದ ಯೋಜನೆಗೆ ಅರ್ಜಿ ಆಹ್ವಾನ

Update: 2022-06-09 15:09 GMT

ಉಡುಪಿ : ಮೀನುಗಾರಿಕೆ ಇಲಾಖೆಯ ವತಿಯಿಂದ ಕೇಂದ್ರ ಸರಕಾರದ ಮಹತ್ವಕಾಂಕ್ಷಿ ಯೋಜನೆಯಾದ ಪ್ರಧಾನಮಂತ್ರಿ ಮತ್ಸ್ಯಸಂಪದ ಯೋಜನೆ ಹಾಗೂ ನೀಲಿಕ್ರಾಂತಿ ಯೋಜನೆಯಡಿ ೨೦೧೮-೧೯ ಮತ್ತು ೨೦೧೯-೨೦ರಲ್ಲಿ ಬಾಕಿ ಉಳಿದಿರುವ ಘಟಕಗಳಿಗಾಗಿ ಅರ್ಹ ಫಲಾಪೇಕ್ಷಿಗಳಿಂದ ಅರ್ಜಿ ಅಹ್ವಾನಿಸಲಾಗಿದೆ. 

ಪ್ರಧಾನಮಂತ್ರಿ ಮತ್ಸ್ಯಸಂಪದ ಯೋಜನೆಯಡಿ ಹಿನ್ನೀರು/ ಲವಣ/ ಕ್ಷಾರೀಯ ಪ್ರದೇಶಗಳಲ್ಲಿ ಬಯೋಫ್ಲಾಕ್ ಕೊಳಗಳ ನಿರ್ಮಾಣ, ಸಿಹಿನೀರಿನ ಬಯೋಫ್ಲಾಕ್ ಕೊಳಗಳ ನಿರ್ಮಾಣ, ಕಡಲ ಮೀನುಗಳ ಸಣ್ಣ ಹ್ಯಾಚರಿ ಕೇಂದ್ರಗಳ ಸ್ಥಾಪನೆ, ಕಡಲ ಕಳೆ ಕೃಷಿಗೆ ರ್ಯಾಫ್ಟ್ ಪದ್ದತಿ, ಮೊನೊಲಿನ್/ಟ್ಯೂಬೆನೆಟ್ ಪದ್ಧತಿ ವಿಧಾನದೊಂದಿಗೆ ಕಡಲಕಳೆ ಕೃಷಿ ಸ್ಥಾಪನೆ, ಬ್ಯಾಕ್ ಯಾರ್ಡ್ ಅಲಂಕಾರಿಕ ಮೀನು ಸಾಕಾಣಿಕೆ ಘಟಕ, ಮಧ್ಯಮ ಪ್ರಮಾಣದ ಅಲಂಕಾರಿಕ ಮೀನು ಸಾಕಾಣಿಕ ಘಟಕ, ಮಧ್ಯಮ ಆರ್‌ಎಎಸ್ ಘಟಕ ಸ್ಥಾಪನೆ, ಸಣ್ಣ ಆರ್‌ಎಎಸ್ ಘಟಕ, ಹಿತ್ತಲಿನ ಮಿನಿ ಆರ್‌ಎಎಸ್ ಘಟಕಗಳ ಸ್ಥಾಪನೆ, ಶೈತ್ಯಾಗಾರ/ಮಂಜುಗಡ್ಡೆ ಸ್ಥಾವರಗಳ ನಿರ್ಮಾಣ, ಶೈತ್ಯಾಗಾರ/ಮಂಜುಗಡ್ಡೆ ಸ್ಥಾವರಗಳ ಆಧುನೀಕರಣ, ಐಸ್ ಪೆಟ್ಟಿಗೆಗಳೊಂದಿಗೆ ಸೈಕಲ್, ಅಲಂಕಾರಿಕ ಮೀನು/ಅಕ್ವೇರಿಯಂ ಮಾರಾಟ ಮಳಿಗೆ ಸೇರಿದಂತೆ ಚಿಲ್ಲರೆ ಮೀನು ಮಾರಾಟ ಮಳಿಗೆಗಳ ನಿರ್ಮಾಣ, ರಫ್ತು ಸಾಮರ್ಥ್ಯಕ್ಕಾಗಿ ಅಸ್ತಿತ್ವ ದಲ್ಲಿರುವ ಮೀನುಗಾರಿಕಾ ದೋಣಿಗಳ ಉನ್ನತೀಕರಣ, ಯಾಂತ್ರೀಕೃತ ಮೀನುಗಾರಿಕಾ ದೋಣಿಗಳಲ್ಲಿ ಜೈವಿಕ ಶೌಚಾಲಯಗಳ ಸ್ಥಾಪನೆ, ಸಾಂಪ್ರದಾಯಿಕ ಮತ್ತು ಯಾಂತ್ರೀಕೃತ ದೋಣಿಗಳಿಗೆ ಸಂವಹನ ಮತ್ತು ಟ್ರಾಕಿಂಗ್ ಸಾಧನಗಳು, ಸಾಂಪ್ರದಾಯಿಕ ಮತ್ತು ಯಾಂತ್ರೀಕೃತ ಮೀನುಗಾರಿಕಾ ದೋಣಿಗಳ ಮೀನುಗಾರರಿಗೆ ಸುರಕ್ಷತಾ ಕಿಟ್‌ಗಳನ್ನು ಒದಗಿಸಲು ಬೆಂಬಲ, ಸಾಂಪ್ರದಾಯಿಕ ಮೀನುಗಾರರಿಗೆ ದೋಣಿ (ಬದಲಿ) ಮತ್ತು ಬಲೆ ಒದಗಿಸು ವುದು ಹಾಗೂ ನೀಲಿಕ್ರಾಂತಿ ಯೋಜನೆಯಡಿ ೧೦ಮೀ. ಉದ್ದದ ಎಫ್‌ಆರ್‌ಪಿ ದೋಣಿ ಶಾಖ ನಿರೋಧಕ ಐಸ್ ಮತ್ತು ಮೀನು ಪೆಟ್ಟಿಗೆ ಮತ್ತು ಕಡಲಕಳೆ ಕೃಷಿ ಘಟಕಗಳಿಗೆ ಜೂನ್ ೩೦ರ ಒಳಗೆ ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಉಡುಪಿ, ಕಾರ್ಕಳ ಹಾಗೂ ಕುಂದಾಪುರ ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಚೇರಿ ಅಥವಾ ಮೀನುಗಾರಿಕೆ ಇಲಾಖೆಯ ಉಪನಿರ್ದೇಶಕರನ್ನು ಸಂಪರ್ಕಿಸ ಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News