ಸಹಾಯವಾಣಿ ಮೂಲಕ ಮನೆ ಬಾಗಿಲಿಗೆ ಪಿಂಚಣಿ ಸೌಲಭ್ಯ: ಉಡುಪಿ ಡಿಸಿ ಕೂರ್ಮಾರಾವ್

Update: 2022-06-10 14:51 GMT
ಉಡುಪಿ ಡಿಸಿ ಕೂರ್ಮಾರಾವ್

ಉಡುಪಿ : ಕಂದಾಯ ಇಲಾಖೆಯ ವಿನೂತನ ಯೋಜನೆಯಾದ ‘ಹಲೋ ಕಂದಾಯ ಸಚಿವರೇ..’ ಸಹಾಯವಾಣಿ ಸಂಖ್ಯೆ 155245ಕ್ಕೆ  ಉಚಿತವಾಗಿ ಕರೆ ಮಾಡುವ ಮೂಲಕ ಕುಟುಂಬದ ವಾರ್ಷಿಕ ಆದಾಯ 32 ಸಾವಿರ ರೂ.ಕ್ಕಿಂತ ಕಡಿಮೆ ಇರುವ ವೃದ್ಧರು, ವಿಶೇಷ ಚೇತನರು, ವಿಧವೆಯರು ಹಾಗೂ ಅವಿವಾಹಿತ ಅಥವಾ ವಿಚ್ಚೇಧಿತ ಮಹಿಳೆಯರು ಮಾಸಿಕ ಪಿಂಚಣಿ ಸೌಲಭ್ಯಕ್ಕಾಗಿ ತಮ್ಮ ಆಧಾರ್ ಸಂಖ್ಯೆಯನ್ನು ಒದಗಿಸಿ, ಕೋರಿಕೆ ಸಲ್ಲಿಸಬಹುದಾಗಿದೆ.

ಈ ಯೋಜನೆಯಡಿ ಪಿಂಚಣಿ ಕೋರಿಕೆ ಸ್ವೀಕರಿಸಿದ 72 ಗಂಟೆಗಳಲ್ಲಿ ಅರ್ಹರಿಗೆ ಪಿಂಚಣಿ ಮಂಜೂರಾತಿ ಮಾಡಿ ಮನೆ ಬಾಗಿಲಿಗೆ ಪಿಂಚಣಿ ಆದೇಶವನ್ನು ತಲುಪಿಸಲಾಗುವುದು. ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News