ಕಾಪು ಸರಕಾರಿ ಕಾಲೇಜಿನಲ್ಲಿ ತರಬೇತಿ ಕಾರ್ಯಾಗಾರ

Update: 2022-06-13 16:46 GMT

ಉಡುಪಿ : ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮ, ಜಿಲ್ಲಾ ಕೌಶಲ್ಯಾಭಿವೃದ್ಧಿ ಇಲಾಖೆ ಇದರ ವತಿಯಿಂದ ನಾಂದಿ ಪೌಂಡೇಶನ್ ಮತ್ತು ಮಹೀಂದ್ರ ಫ್ರೈಡ್ ಕ್ಲಾಸ್ ರೂಮ್ ಇವರ ಸಹಯೋಗದೊಂದಿಗೆ ಕಾಪು ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅಂತಿಮ ವರ್ಷದ ವಿದ್ಯಾರ್ಥಿನಿಯರಿಗೆ ನಡೆದ ಸಾಫ್ಟ್ ಸ್ಕಿಲ್ಸ್ ಕುರಿತ ತರಬೇತಿ ಕಾರ್ಯಗಾರವನ್ನು ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಜಗದೀಶ್ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಕೌಶಲ್ಯಾಭಿವೃದ್ಧಿ ಇಲಾಖೆಯ ಸಹಾಯಕ ನಿರ್ದೇಶಕ ಅರುಣ್ ಬಿ., ಜಿಲ್ಲಾ ಸಲಹೆಗಾರ್ತಿ ಸಂಧ್ಯಾರಾಣಿ, ನಾಂದಿ ಪೌಂಡೇಶನ್ ತರಬೇತುದಾರ ಚಿನ್ನೀ ಅಜಯ್ ಹಾಗೂ ವಿದ್ಯಾರ್ಥಿನಿಯರು ಭಾಗವಹಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News