ಕೇಂದ್ರ ಸರಕಾರದ ವಿವಿಧ ಇಲಾಖೆಗಳಲ್ಲಿ 10 ಲಕ್ಷ ಹುದ್ದೆ ಭರ್ತಿಗೆ ಪ್ರಧಾನಿ ಮೋದಿ ಸೂಚನೆ

Update: 2022-06-14 05:42 GMT
Photo:PTI

ಹೊಸದಿಲ್ಲಿ: ಮುಂದಿನ ಒಂದೂವರೆ ವರ್ಷದಲ್ಲಿ 10 ಲಕ್ಷ ಜನರನ್ನು "ಮಿಷನ್ ಮೋಡ್"  ಮೂಲಕ  ನೇಮಕ ಮಾಡಿಕೊಳ್ಳುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ಕೇಂದ್ರ ಸರಕಾರದ ವಿವಿಧ ಸರಕಾರಿ ಇಲಾಖೆಗಳು ಹಾಗೂ  ಸಚಿವಾಲಯಗಳಿಗೆ ಸೂಚಿಸಿದ್ದಾರೆ ಎಂದು ಪ್ರಧಾನಮಂತ್ರಿ ಕಚೇರಿ ಮಂಗಳವಾರ ತಿಳಿಸಿದೆ.

ಎಲ್ಲಾ ಸರಕಾರಿ ಇಲಾಖೆಗಳು ಹಾಗೂ  ಸಚಿವಾಲಯಗಳಲ್ಲಿನ ಮಾನವ ಸಂಪನ್ಮೂಲಗಳ ಸ್ಥಿತಿಗತಿಯನ್ನು ಪರಿಶೀಲಿಸಿದ ನಂತರ ಪ್ರಧಾನಿ ಮೋದಿಯವರು ಈ  ನಿರ್ದೇಶನ ನೀಡಿದ್ದಾರೆ ಎಂದು ಪ್ರಧಾನ ಮಂತ್ರಿ ಕಚೇರಿ ಅಥವಾ ಪಿಎಂಒ ತಿಳಿಸಿದೆ.

ನಿರುದ್ಯೋಗ ಸಮಸ್ಯೆಗೆ ಸಂಬಂಧಿಸಿದಂತೆ ಪ್ರತಿಪಕ್ಷಗಳು ಪದೇ ಪದೇ ಟೀಕೆ ಮಾಡುತ್ತಿರುವ ಹಿನ್ನೆಲೆಯಲ್ಲಿ ಸರಕಾರದಿಂದ ಈ ನಿರ್ಧಾರ ಬಂದಿದೆ. ವಿವಿಧ ಸರಕಾರಿ ವಲಯಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಹುದ್ದೆಗಳು  ಖಾಲಿ ಉಳಿದಿವೆ.

ಪಿಎಂ ನರೇಂದ್ರ ಮೋದಿ ಅವರು ಎಲ್ಲಾ ಇಲಾಖೆಗಳು ಹಾಗೂ  ಸಚಿವಾಲಯಗಳಲ್ಲಿನ ಮಾನವ ಸಂಪನ್ಮೂಲಗಳ ಸ್ಥಿತಿಗತಿಯನ್ನು ಪರಿಶೀಲಿಸಿದರು ಹಾಗೂ  ಮಿಷನ್ ಮೋಡ್‌ನಲ್ಲಿ ಮುಂದಿನ 1.5 ವರ್ಷಗಳಲ್ಲಿ 10 ಲಕ್ಷ ಜನರನ್ನು ಸರಕಾರದಿಂದ ನೇಮಕಾತಿ ಮಾಡುವಂತೆ ಸೂಚನೆ ನೀಡಿದರು”ಎಂದು ಪ್ರಧಾನಿ ಕಾರ್ಯಾಲಯವು ಟ್ವೀಟ್‌ನಲ್ಲಿ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News