ಸಿಇಟಿ ಪರೀಕ್ಷೆ: ನಿಷೇಧಾಜ್ಞೆ ಜಾರಿ

Update: 2022-06-14 14:20 GMT

ಉಡುಪಿ, ಜೂ.೧೪: ಪ್ರಸಕ್ತ ಸಾಲಿನ ವೃತ್ತಿಪರ ಕೋರ್ಸುಗಳ ಪ್ರವೇಶಕ್ಕಾಗಿ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ)ಯು ಜೂನ್ ೧೬ ಮತ್ತು ೧೭ರಂದು ಜಿಲ್ಲೆಯ ೧೦ ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಪರೀಕ್ಷಾ ದಿನಗಳಂದು ಸಂಬಂಧಿಸಿದ ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ, ಶಿಸ್ತು ಮತ್ತು ಶಾಂತಿಯನ್ನು ಕಾಪಾಡುವ ಸಲುವಾಗಿ, ಪರೀಕ್ಷೆಗಳು ಸುಸೂತ್ರವಾಗಿ ಮತ್ತು ದೋಷರಹಿತವಾಗಿ ನಡೆಯಲು ಮತ್ತು ನಡೆಯ ಬಹುದಾದ ಎಲ್ಲಾ ರೀತಿಯ ಅವ್ಯವಹಾರಗಳನ್ನು ತಡೆಗಟ್ಟಲು ನಿಗದಿಪಡಿಸಿದ ಪರೀಕ್ಷಾ ಕೇಂದ್ರಗಳ ಸುತ್ತಲೂ ೨೦೦ಮೀ. ವ್ಯಾಪ್ತಿಯನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ, ೧೯೭೩ರ ಕ್ರಿಮಿನಲ್ ಪ್ರೊಸೀಜರ್ ಕೋಡ್ ಸೆಕ್ಷನ್ ೧೪೪(೧)ರಂತೆ ನಿಷೇಧಾಜ್ಷೆ ಜಾರಿಗೊಳಿಸಿ, ಜಿಲ್ಲಾಧಿಕಾರಿ ಹಾಗೂ  ಜಿಲ್ಲಾ ದಂಡಾಧಿಕಾರಿ ಕೂರ್ಮಾರಾವ್ ಎಂ ಆದೇಶ ಹೊರಡಿಸಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News