ವಿಕಲಚೇತನರಿಗೆ ಸಲಕರಣೆ: ಪೂರ್ವಭಾವಿ ತಪಾಸಣಾ ಶಿಬಿರ

Update: 2022-06-14 15:16 GMT

ಉಡುಪಿ, ಜೂ.೧೪: ಜಿಲ್ಲಾಡಳಿತ, ಜಿಪಂ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಇಲಾಖೆ, ಅಲಿಮ್ಕೊ ಆಫ್ ಇಂಡಿಯಾ, ಭಾರತೀಯ ರೆಡ್‌ಕ್ರಾಸ್ ಸಂಸ್ಥೆಯ ಅನುಷ್ಠಾನದಲ್ಲಿರುವ ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರದ ಸಹಯೋಗ ದೊಂದಿಗೆ ವಿಕಲಚೇತನ ಫಲಾನುಭವಿ ಹಾಗೂ ಹಿರಿಯ ನಾಗರಿಕರಿಗೆ ಸಾಧನ ಸಲಕರಣೆ ವಿತರಿಸುವ ನಿಟ್ಟಿನಲ್ಲಿ ಪೂರ್ವಭಾವಿ ತಪಾಸಣಾ ಶಿಬಿರವನ್ನು ಮಂಗಳವಾರ ಅಜ್ಜರಕಾಡು ಜಿಲ್ಲಾಸ್ಪತ್ರೆಯಲ್ಲಿ ಹಮ್ಮಿಕೊಳ್ಳಲಾಗಿತ್ತು.

ಈ ತಪಾಸಣಾ ಶಿಬಿರದಲ್ಲಿ ರೆಡ್‌ಕ್ರಾಸ್ ಸಂಸ್ಥೆ ಉಡುಪಿ ಜಿಲ್ಲಾಘಟಕದ ಸಭಾಪತಿ ಬಸ್ರೂರು ರಾಜೀವ್ ಶೆಟ್ಟಿ, ಕಾರ್ಯದರ್ಶಿ ಕೆ.ರತ್ನಾಕರ ಶೆಟ್ಟಿ, ಗೌರವ ಖಚಾಂಚಿ ರಮಾದೇವಿ, ಡಿಡಿಆರ್‌ಸಿ ನೋಡಲ್‌ಅಧಿಕಾರಿ ಜಯಶ್ರೀ ಉಪಸ್ಥಿತರಿದ್ದರು. ಭಾಗವಹಿಸಿದ ಫಲಾನುಭವಿಗಳಿಗೆ ರೆಡ್‌ಕ್ರಾಸ್ ಸಂಸ್ಥೆಯ ವತಿಯಿಂದ ಮಾಸ್ಕ್‌ಗಳನ್ನು ವಿತರಿಸಲಾಯಿತು.

ಅದೇ ರೀತಿ ಬೆಳಗ್ಗೆ ೯ಗಂಟೆಯಿಂದ ಸಂಜೆ ೪.೩೦ರವರೆಗೆ ಜೂ.೧೫ರಂದು ಬ್ರಹ್ಮಾವರ ಸಮುದಾಯ ಆರೋಗ್ಯ ಕೇಂದ್ರ, ೧೬ರಂದು ಬೈಂದೂರು ಸಮುದಾಯ ಆರೋಗ್ಯ ಕೇಂದ್ರ, ೧೭ರಂದು ಕುಂದಾಪುರ ಬಾಲಕಿಯರ ಹಿರಿಯ ಪ್ರಾಥಮಿಕ ಶಾಲೆ, ೧೮ರಂದು ವಂಡ್ಸೆ ಸಮುದಾಯ ಆರೋಗ್ಯ ಕೇಂದ್ರ, ೨೦ರಂದು ನಾವುಂದ ಹಿರಿಯ ಪ್ರಾಥಮಿಕ ಶಾಲೆ, ೨೧ರಂದು ಹಾಲಾಡಿ ಕಿರಿಯ ಪ್ರಾಥಮಿಕ ಶಾಲೆ, ೨೨ರಂದು ಕಾರ್ಕಳ ತಾಲೂಕು ಆಸ್ಪತ್ರೆ, ೨೩ರಂದು ಹೆಬ್ರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪೂರ್ವಭಾವಿ ತಪಾಸಣಾ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.  

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News