ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ ಅರ್ಜಿ ಆಹ್ವಾನ

Update: 2022-06-15 13:17 GMT

ಮಂಗಳೂರು,ಜೂ.15: ರಾಜ್ಯ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಪಾರ್ಸಿ, ಸಿಖ್, ಬೌದ್ದ ಜನಾಂಗದ ಅರ್ಹರಿಂದ 2022-23ನೇ ಸಾಲಿನಲ್ಲಿ ಸರಕಾರದ ವಿವಿಧ ಯೋಜನೆಗಳ ಸಲವತ್ತು ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.

ಸ್ವಯಂ ಉದ್ಯೋಗ ಯೋಜನೆಯಡಿ ವ್ಯಾಪಾರ, ಸಣ್ಣ ಕೈಗಾರಿಕೆ ಮತ್ತು ಕೃಷಿ ಅವಲಂಭಿತ ಚಟುವಟಿಕೆ ಮುಂತಾದವುಗಳನ್ನು ಪ್ರಾರಂಭಿಸಲು ಸಾಲ ಮತ್ತು ಸಹಾಯಧನ ನೀಡಲಾಗುವುದು.

ಶ್ರಮಶಕ್ತಿ ಯೋಜನೆಯಡಿ ಸಮುದಾಯದ ಕುಲಕಸುಬುದಾರರಿಗೆ ತರಬೇತಿ ನೀಡಿ ಅವರು ತಮ್ಮ ಕಲಾತ್ಮಕ ಹಾಗೂ ತಾಂತ್ರಿಕ ಕೌಶಲ ವೃದ್ದಿಸಿಕೊಂಡು ಅದೇ ಕಸುಬಿನಲ್ಲಿ ಮುಂದುವರೆಯಲು ಹಾಗೂ ಸಣ್ಣ ವ್ಯಾಪಾರ ಪ್ರಾರಂಭಿಸಲು ಶೇ.50ರಷ್ಟು ಸಹಾಯಧನ ನೀಡಲಾಗುವುದು.
ಪ್ಯಾಸೆಂಜರ್ ಆಟೋ ರಿಕ್ಷಾ, ಟ್ಯಾಕ್ಸಿ, ಗೂಡ್ಸ್ ವಾಹನ ಖರೀದಿ ಯೋಜನೆಯಲ್ಲಿ ರಾಷ್ಟ್ರೀಕೃತ ಬ್ಯಾಂಕುಗಳ ಸಹಯೋಗದೊಂದಿಗೆ ಈ ವಾಹನಗಳನ್ನು ಖರೀದಿಸಲು ಶೇ.33ರಷ್ಟು ಸಹಾಯಧನ ನೀಡಲಾಗುವುದು.

ಆಸಕ್ತರು ವೆಬ್‌ಸೈಟ್ https://kmdconline.karnataka.gov.in/ ಮೂಲಕ ಅರ್ಜಿ ಸಲ್ಲಿಸಬಹುದು ಎಂದು ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News