ಉಡುಪಿ; ಗುರುವಾರ ಐವರಲ್ಲಿ ಕೋವಿಡ್ ಸೋಂಕು ಪತ್ತೆ

Update: 2022-06-16 13:21 GMT

ಉಡುಪಿ : ಜಿಲ್ಲೆಯಲ್ಲಿ ಗುರುವಾರ ಹೊಸದಾಗಿ ಐದು ಮಂದಿಯಲ್ಲಿ ಕೋವಿಡ್ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, ಈ ಮೂಲಕ ಜಿಲ್ಲೆಯಲ್ಲಿರುವ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ ಮತ್ತೆ 10ಕ್ಕೇರಿದೆ. 

ದಿನದಲ್ಲಿ ಇಬ್ಬರು ಪುರುಷರು ಹಾಗೂ ಮೂವರು ಮಹಿಳೆಯರಲ್ಲಿ ಕೋವಿಡ್ ಸೋಂಕು ಪತ್ತೆಯಾಗಿದ್ದು, ಇವರಲ್ಲಿ ನಾಲ್ವರು ಉಡುಪಿ ತಾಲೂಕಿನವರಾದರೆ ಉಳಿದೊಬ್ಬರು ಕುಂದಾಪುರ ತಾಲೂಕಿನವರು. ಇವರಲ್ಲಿ ಒಬ್ಬರು ಕೋವಿಡ್ ಆಸ್ಪತ್ರೆ ದಾಖಲಿಸಲಾಗಿದ್ದರೆ, ಉಳಿದವರೆಲ್ಲರೂ ತಮ್ಮ ಮನೆಗಳಲ್ಲಿ ಚಿಕಿತ್ಸೆ ಪಡೆಯುತಿದ್ದಾರೆ. 

ಜಿಲ್ಲೆಯಲ್ಲಿ ಇಂದು ಒಟ್ಟು ೨೭೮ ಮಂದಿಯನ್ನು ಕೋವಿಡ್ ಪರೀಕ್ಷೆ ಗೊಳಪಡಿಸಲಾಗಿದ್ದು, ಉಡುಪಿ ತಾಲೂಕಿನ ೧೯೭ ಮಂದಿಯಲ್ಲಿ ನಾಲ್ವರು ಪಾಸಿಟಿವ್ ಬಂದಿದ್ದರೆ ಕುಂದಾಪುರ ತಾಲೂಕಿನ ೪೫ ಮಂದಿಯಲ್ಲಿ ಒಬ್ಬರಲ್ಲಿ ಸೋಂಕು ಪತ್ತೆಯಾಗಿದೆ. ಕಾರ್ಕಳ ತಾಲೂಕಿನ ೩೬ ಮಂದಿಯಲ್ಲಿ ಯಾರಲ್ಲೂ ಸೋಂಕು ಕಂಡುಬಂದಿಲ್ಲ. 

೯೧ ಮಕ್ಕಳಿಗೆ ಲಸಿಕೆ: ಜಿಲ್ಲೆಯಲ್ಲಿ ಇಂದು ಒಟ್ಟು ೩೯೧ ಮಂದಿಗೆ ಕೋವಿಡ್ ಲಸಿಕೆಯನ್ನು ನೀಡಲಾಗಿದೆ. ಇವರಲ್ಲಿ ೯೧ ಮಂದಿ ೧೨ರಿಂದ ೧೪ ವರ್ಷದೊಳಗಿನ ಮಕ್ಕಳೂ ಸೇರಿದ್ದಾರೆ. ೪೮ ಮಕ್ಕಳಿಗೆ ಮೊದಲ ಡೋಸ್ ನೀಡಿದ್ದರೆ, ೪೩ ಮಂದಿ ಮಕ್ಕಳು ಎರಡನೇ ಡೋಸ್ ಪಡೆದುಕೊಂಡಿದ್ದಾರೆ. ಈ ಮೂಲಕ ಜಿಲ್ಲೆಯ ೩೩,೪೮೧ ಮಂದಿ ಮಕ್ಕಳು ಮೊದಲ ಡೋಸ್ ಹಾಗೂ ೨೬,೭೭೪ ಮಂದಿ ಎರಡನೇ ಡೋಸ್ ಪಡೆದಿದ್ದಾರೆ.

೧೫ರಿಂದ ೧೮ ವರ್ಷದೊಳಗಿನ ೪೯,೧೮೩ ಮಂದಿ ಈಗಾಗಲೇ ಮೊದಲ ಡೋಸ್ ಪಡೆದಿದ್ದರೆ, ೪೭,೯೦೦ ಮಂದಿ ಎರಡನೇ ಡೋಸ್ ಲಸಿಕೆಯನ್ನು ತೆಗೆದುಕೊಂಡಿದ್ದಾರೆ. ಇಂದು ೨೦೦ ಮಂದಿ ಸೇರಿದಂತೆ ೬೦ ವರ್ಷ ಮೇಲಿನ ೬೧,೬೬೯ ಮಂದಿ ಹಿರಿಯ ನಾಗರಿಕರು ಸಹ ಮುನ್ನೆಚ್ಚರಿಕೆ ಲಸಿಕೆಯನ್ನು ಪಡೆದಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News