ಚೇರ್ಕಾಡಿಯಲ್ಲಿ ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ
Update: 2022-06-16 14:48 GMT
ಉಡುಪಿ : ಜೂ.18ರ ಶನಿವಾರ ನಡೆಯುವ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮ ಈ ಬಾರಿ ಬ್ರಹ್ಮಾವರ ತಾಲೂಕಿನ ಚೇರ್ಕಾಡಿ ಗ್ರಾಮದ ಪೇತ್ರಿ ಯುವಕ ಮಂಡಲ ವಠಾರದಲ್ಲಿ ನಡೆಯಲಿದೆ. ಆದುದರಿಂದ ಚೇರ್ಕಾಡಿ ಗ್ರಾಮಕ್ಕೆ ಒಳಪಡುವ ಗ್ರಾಮಸ್ಥರು ಹಾಗೂ ಸಾರ್ವಜನಿಕರು ತಮ್ಮ ಅಹವಾಲುಗಳನ್ನು ಮುಂಚಿತವಾಗಿ ಚೇರ್ಕಾಡಿ ಗ್ರಾಮದ ಗ್ರಾಮಕರಣಿಕರ ಕಚೇರಿಯಲ್ಲಿ ನೀಡುವಂತೆ ಅಪರ ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.