ಉಡುಪಿ: ಅಂತಾರಾಷ್ಟ್ರೀಯ ಯೋಗ ದಿನಾಚರಣೆ
Update: 2022-06-17 14:58 GMT
ಉಡುಪಿ : ಬೆಂಗಳೂರಿನ ಆಯುಷ್ ಇಲಾಖೆ, ಜಿಲ್ಲಾಡಳಿತ, ಜಿಪಂ, ಜಿಲ್ಲಾ ಆಯುಷ್ ಇಲಾಖೆ, ಜಿಲ್ಲಾ ಸರ್ವೇಕ್ಷಣಾ ಘಟಕದ ಎನ್‌ಸಿಡಿ ವಿಭಾಗ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಪರ್ಯಾಯ ಕೃಷ್ಣಾಪುರ ಮಠ ಉಡುಪಿ ಹಾಗೂ ತೆಂಕನಿಡಿಯೂರು ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರಗಳ ಸಹಯೋಗದಲ್ಲಿ ಆಜಾದಿ ಕಾ ಅಮೃತ ಮಹೋತ್ಸವದ ಅಂಗವಾಗಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಜೂನ್ ೨೧ರಂದು ಬೆಳಗ್ಗೆ ೬:೪೫ಕ್ಕೆ ಉಡುಪಿಯ ಶ್ರೀಕೃಷ್ಣ ಮಠ ರಾಜಾಂಗಣದಲ್ಲಿ ನಡೆಯಲಿದೆ.
ಕಾರ್ಯಕ್ರಮವನ್ನು ಉಡುಪಿ ಶಾಸಕ ಕೆ.ರಘುಪತಿ ಭಟ್ ಉದ್ಘಾಟಿಸಿ, ಅಧ್ಯಕ್ಷತೆ ವಹಿಸಲಿದ್ದಾರೆ. ಜಿಲ್ಲೆಯ ಜನಪ್ರತಿನಿಧಿಗಳು, ಗಣ್ಯರು ಇದರಲ್ಲಿ ಭಾಗವಹಿಸಲಿದ್ದಾರೆ.