ವಿದ್ಯಾರ್ಥಿ ನಿಲಯ ಪ್ರವೇಶ: ಅರ್ಜಿ ಆಹ್ವಾನ

Update: 2022-06-17 15:08 GMT

ಉಡುಪಿ : ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಉಡುಪಿ ತಾಲೂಕು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ಮತ್ತು ನಂತರದ ಬಾಲಕರ ಮತ್ತು ಬಾಲಕಿಯರ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಸಿಇಟಿ ಕೌನ್ಸಿಲಿಂಗ್ ಮಾದರಿಯಲ್ಲಿ ಅವಕಾಶ ಕಲ್ಪಿಸಲು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ ೧, ಪ್ರವರ್ಗ ೨ಎ, ೨ಬಿ, ೩ಎ, ೩ಬಿ ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಜೂನ್ ೩೦ ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ -www.sw.kar.nic.in- ಮತ್ತು - www.tw.kar.nic.in-ಅಥವಾ ದೂರವಾಣಿ ಸಂಖ್ಯೆ: ೦೮೨೦-೨೫೨೮೮೮೪ ಅನ್ನು ಸಂಪರ್ಕಿಸಬಹುದು ಎಂದು ಉಡುಪಿ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News