ಉಡುಪಿ ಜಿಲ್ಲಾ ಸರಕಾರಿ ನೌಕರರ ವಾರ್ಷಿಕ ಸಮಾವೇಶ

Update: 2022-06-19 14:35 GMT

ಉಡುಪಿ : ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಉಡುಪಿ ಜಿಲ್ಲಾ ಶಾಖೆ ಮತ್ತು ಜಿಲ್ಲಾಧ್ಯಕ್ಷರ ಅಭಿನಂದನಾ ಸಮಿತಿ ಇವರ ಸಂಯುಕ್ತ ಆಶ್ರಯದಲ್ಲಿ ಉಡುಪಿ ಜಿಲ್ಲಾ ಸರಕಾರಿ ನೌಕರರ ವಾರ್ಷಿಕ ಸಮಾವೇಶ ಹಾಗೂ ಸೇವಾ ನಿವೃತ್ತಿಗೊಳ್ಳಲಿರುವ ಉಡುಪಿ ಜಿಲ್ಲಾ ಸಂಘದ ಅಧ್ಯಕ್ಷ ಸುಬ್ರಹ್ಮಣ್ಯ ಶೇರೆಗಾರ್ ಇವರಿಗೆ ಅಭಿನಂದನಾ ಸಮಾರಂಭ ಜೂನ್ ೨೬ರಂದು ಬೆಳಗ್ಗೆ 10 ಗಂಟೆಗೆ ಉಡುಪಿಯ ಅಮ್ಮಣ್ಣಿ ರಾಮಣ್ಣ ಶೆಟ್ಟಿ ಸಭಾಭವನದಲ್ಲಿ ನಡೆಯಲಿದೆ.

ಕಾರ್ಯಕ್ರಮವನ್ನು ರಾಜ್ಯದ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಅಂಗಾರ ಉದ್ಘಾಟಿಸಲಿದ್ದು, ಬೆಂಗಳೂರು ರಾಜ್ಯ ಸರಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ಅಧ್ಯಕ್ಷತೆ ವಹಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನಿಲ್ ಕುಮಾರ್, ಉಡುಪಿ ಶಾಸಕ ಕೆ.ರಘುಪತಿ ಭಟ್, ಜಿಲ್ಲಾಧಿಕಾರಿ ಕೂರ್ಮರಾವ್ ಎಂ, ಜಿಪಂ ಮುಖ್ಯ ಕಾರ್ಯ ನಿರ್ವಹ ಣಾಧಿಕಾರಿ ಪ್ರಸನ್ನ ಹೆಚ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್. ವಿಷ್ಣುವರ್ಧನ್ ಭಾಗವಹಿಸಲಿದ್ದಾರೆ ಎಂದು ಸಂಘಟಕರ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News