ಮಣಪಾಲ: ಮಾಹೆಯಿಂದ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

Update: 2022-06-21 15:26 GMT

ಮಣಿಪಾಲ: ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಷನ್ (ಮಾಹೆ), ಸೆಂಟರ್ ಫಾರ್ ಇಂಟರ್‌ಗ್ರೇಟಿವ್ ಮೆಡಿಸಿನ್ ಎಂಡ್ ರಿಸರ್ಚ್‌ನ ಯೋಗಾ ವಿಭಾಗದ ವತಿಯಿಂದ ಇಂದು ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಯನ್ನು ಆಯೋಜಿಸಿತ್ತು.

ಸಂಸ್ಥೆಯ ಯೋಗ ವಿಭಾಗದ ಮುಖ್ಯಸ್ಥೆ ಡಾ.ಅನ್ನಪೂರ್ಣ ಕೆ. ಇವರ ನೇತೃತ್ವದಲ್ಲಿ ಮಣಿಪಾಲ ಕೆಎಂಸಿಯ ಡಾ.ಟಿಎಂಎ ಪೈ ಸಭಾಂಗಣದಲ್ಲಿ ಒಂದು ಗಂಟೆಗಳ ಯೋಗ ಶಿಬಿರ ನಡೆದು ಇದರಲ್ಲಿ ಮಾಹೆಯ ವಿವಿಧ ವಿಭಾಗಗಳ ವಿದ್ಯಾರ್ಥಿಗಳು, ಪ್ರಾಧ್ಯಾಪಕರು ಹಾಗೂ ಇತರ ಸಿಬ್ಬಂದಿಗಳು ಪಾಲ್ಗೊಂಡಿದ್ದರು.

ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಮಾಹೆಯ ಪ್ರೊ ಚಾನ್ಸಲರ್ ಡಾ. ಎಚ್.ಎಸ್.ಬಲ್ಲಾಳ್, ಕುಲಪತಿ ಲೆ.ಜ.(ಡಾ.) ಎಂ.ಡಿ.ವೆಂಕಟೇಶ್, ಪ್ರೊ ವೈಸ್ ಚಾನ್ಸಲರ್ ಡಾ.ಎಂ.ವೆಂಕಟ್ರಾಯ ಪ್ರಭು, ರಿಜಿಸ್ಟ್ರಾರ್ ಡಾ.ನಾರಾಯಣ್ ಸಭಾಹಿತ್, ಕೆಎಂಸಿಯ ಡೀನ್ ಡಾ.ಶರತ್‌ಕುಮಾರ್ ರಾವ್ ಮುಂತಾವರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಯೋಗ ದಿನಾಚರಣೆಯ ಅಂಗವಾಗಿ ವಿದ್ಯಾರ್ಥಿಗಳಿಗೆ  ನಡೆಸಿದ ಆಸನವೂ ಸೇರಿದಂತೆ ವಿವಿಧ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಕೆಎಂಸಿಯ ನಿವೃತ್ತ ಪ್ರೊಪೆಸರ್ ಡಾ.ನಳಿನಿ ಭಾಸ್ಕರಾ ನಂದ ಹಾಗೂ ಮಣಿಪಾಲ ನರ್ಸಿಂಗ್ ಕಾಲೇಜಿನ ಪ್ರೊ.ಡಾ.ಅನಿಸ್ ಜೋರ್ಜ್ ಅವರನ್ನು ಸನ್ಮಾನಿಸಲಾಯಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News