ಅರಿವು ಸಾಲ ಯೋಜನೆ: ಅರ್ಜಿ ಆಹ್ವಾನ

Update: 2022-06-21 15:40 GMT

ಉಡುಪಿ : ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಸಿಇಟಿ ಹಾಗೂ ನೀಟ್‌ನಲ್ಲಿ ಎಂ.ಬಿ.ಬಿ.ಎಸ್, ಬಿ.ಡಿ.ಎಸ್, ಬಿ.ಇ, ಬಿ.ಆರ್ಕ್, ಬಿ.ಟೆಕ್ ಮತ್ತು ಬಿ.ಆಯುಷ್ ಕೋರ್ಸುಗಳಿಗೆ ಆಯ್ಕೆಯಾಗುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳು ಅರಿವು ಸಾಲ ಯೋಜನೆಯಡಿ ಯಲ್ಲಿ ಸಾಲ ಪಡೆಯಲು ನಿಗಮದ ವೆಬ್‌ಸೈಟ್ -kmdconline.karnataka.gov.in-ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಜುಲೈ ೨೦ ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರು, ಕರ್ನಾಟಕ ಅಲ್ಪ ಸಂಖ್ಯಾತರ ಅಭಿವೃದ್ಧಿ ನಿಗಮ, ಮೌಲಾನಾ ಅಜಾದ್ ಭವನ, ಅಲೆವೂರು ರಸ್ತೆ, ಶಿವಳ್ಳಿ ಗ್ರಾಮ, ಮಣಿಪಾಲ, ಉಡುಪಿ, ದೂರವಾಣಿ ಸಂಖ್ಯೆ:೦೮೨೦-೨೫೭೪೯೯೦, ಸಹಾಯವಾಣಿ ಸಂಖ್ಯೆ :೮೨೭೭೭೯೯೯೯೦ ಅಥವಾ ಉಡುಪಿ ದೂ.ಸಂಖ್ಯೆ: ೦೮೨೦-೨೫೭೪೫೯೬, ಕಾರ್ಕಳ ದೂ.ಸಂಖ್ಯೆ : ೦೮೨೫೮-೨೩೧೧೦೧ ಹಾಗೂ ಕುಂದಾಪುರ ದೂ.ಸಂಖ್ಯೆ: ೦೮೨೫೪-೨೩೦೩೭೦ ತಾಲೂಕು ಮಾಹಿತಿ ಕೇಂದ್ರಗಳನ್ನು ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News