ರವೀಂದ್ರ ಶೆಟ್ಟಿಗೆ ಏಷ್ಯಾ ವೇದಿಕ್ ಕಲ್ಚರಲ್ ರಿಸರ್ಚ್ ಯುನಿವರ್ಸಿಟಿಯಿಂದ ಗೌರವ ಡಾಕ್ಟರೇಟ್
Update: 2022-06-28 06:42 GMT
ಕಾರ್ಕಳ , ಜೂ.28: ಕರ್ನಾಟಕ ರಾಜ್ಯ ಫೆಡರೇಶನ್ ಆಫ್ ಕ್ವಾರಿ ಆ್ಯಂಡ್ ಸ್ಟೋನ್ ಕ್ರಷರ್ಸ್ ಅಸೋಸಿಯೇಶನ್ ರಾಜ್ಯಾಧ್ಯಕ್ಷ ರವೀಂದ್ರ ಶೆಟ್ಟಿಯವರಿಗೆ ಏಷ್ಯಾ ವೇದಿಕ್ ಕಲ್ಚರಲ್ ರಿಸರ್ಚ್ ಯುನಿವರ್ಸಿಟಿ ಗೌರವ ಡಾಕ್ಟರೇಟ್ ನೀಡಿ ಗೌರವಿಸಿದೆ.
ರವೀಂದ್ರ ಶೆಟ್ಟಿಯವರ ಸಮಾಜ ಸೇವೆಯನ್ನು ಪರಿಗಣಿಸಿ ಈ ಪುರಸ್ಕಾರ ನೀಡಲಾಗಿದೆ. ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ ಕ್ಷೇತ್ರಕ್ಕೆ ಅವರು ಅಪಾರ ಕೊಡುಗೆ ನೀಡಿದ್ದಾರೆ.