ನಂಜುಂಡಿಗೆ ಬುದ್ಧಿ ಹೇಳುವಂತೆ ವಿಶ್ವಕರ್ಮ ಮುಖಂಡರಿಂದ ನಳಿನ್ ಕುಮಾರ್ ಕಟೀಲ್‌ಗೆ ಮನವಿ
ಉಡುಪಿ : ವಿಧಾನ ಪರಿಷತ್ ಸದಸ್ಯ ಕೆ.ಪಿ.ನಂಜುಂಡಿ ಬೆಂಬಲಿ ಗರು, ಸಚಿವ ಕೋಟ ಶ್ರೀನಿವಾಸ ಪೂಜಾರಿ ಯಿಂದ ವಿಶ್ವಕರ್ಮ ಸಮಾಜ ಒಡೆಯುವ ಸಂಚು ಎಂಬ ಬೇಜವಾಬ್ದಾರಿ ಹೇಳಿಕೆಗಳನ್ನು ಕೊಡುತ್ತಿದ್ದು, ಈ ಚರ್ಚೆ ಮತ್ತು ವಿವಾದಗಳನ್ನು ಕೆ.ಪಿ.ನಂಜುಂಡಿ ಹೆಸರಿನಲ್ಲಿ ನಡೆಸುತ್ತಿರುವುದ ರಿಂದ ನಂಜುಂಡಿಯನ್ನು ಕರೆದು ಬುದ್ಧಿ ಹೇಳಬೇಕು ಎಂದು ವಿಶ್ವಕರ್ಮ ಮುಖಂಡರ ನಿಯೋಗ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದೆ.
ಸಮಾಜ ಒಡೆಯುತ್ತಿರುವ ಕೆಲಸವನ್ನು ಬೇರಾರೂ ಮಾಡುತ್ತಿಲ್ಲ. ಸ್ವತಃ ನಂಜುಂಡಿಯವರೇ ಮಾಡುತ್ತಿದ್ದಾರೆ. ಎಲ್ಲರನ್ನೂ ಒಟ್ಟಾಗಿ ಕೊಂಡೊಯ್ಯ ಬೇಕಾದ ದಿನಗಳಲ್ಲಿ ನಂಜುಂಡಿ ಬೆಂಬಲಿಗರು ಎನ್ನುವ ಕೆಲವರು ಮಾಡುವ ಅನಾಹುತಗಳಿಂದಾಗಿ ಸಮಾಜದ ಬಗ್ಗೆ ಕೆಟ್ಟ ಸಂದೇಶ ರವಾನೆ ಆಗುತ್ತಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯಾ ಧ್ಯಕ್ಷರು ಪಕ್ಷದ ಶಾಸಕರಿಗೆ ಈ ಕುರಿತು ಮಾರ್ಗ ದರ್ಶನ ನೀಡಬೇಕೆಂದು ಮನವಿಯಲ್ಲಿ ತಿಳಿಸಲಾಗಿದೆ.
ನಿಯೋಗದಲ್ಲಿ ವಿಶ್ವಕರ್ಮ ಒಕ್ಕೂಟದ ಅಧ್ಯಕ್ಷ ಮಧು ಆಚಾರ್ಯ ಮುಲ್ಕಿ, ಆನೆಗುಂದಿ ಮಹಾಸಂಸ್ಥಾನ ಸರಸ್ವತಿ ಪೀಠ ಪ್ರತಿಷ್ಠಾನದ ಅಧ್ಯಕ್ಷ ಶ್ರೀಧರ ಆಚಾರ್ಯ, ವಿಶ್ವಕರ್ಮ ಒಕ್ಕೂಟದ ಮಾಜಿ ಅಧ್ಯಕ್ಷ ಅಲೆವೂರು ಯೋಗೀಶ್ ಆಚಾರ್ಯ, ಕಾಳಿಕಾಂಬ ದೇವಸ್ಥಾನದ ಕೇಶವಾಚಾರ್ಯ ಮಂಗಳೂರು, ಕಳಿ ಚಂದ್ರಯ್ಯ ಆಚಾರ್ಯ ಉಪ್ರಳ್ಳಿ, ತ್ರಾಸಿ ಸುಧಾಕರ್ ಆಚಾರ್ಯ, ವಸಂತ ಆಚಾರ್ಯ ಸುರತ್ಕಲ್ ಉಪಸ್ಥಿತರಿದ್ದರು.