ಹೆಜಮಾಡಿ | ರಾಷ್ಟ್ರೀಯ ಹೆದ್ದಾರಿ ಬದಿ ಕಮರಿಗೆ ಬಿದ್ದ ಖಾಸಗಿ ಬಸ್

Update: 2022-07-02 08:03 GMT

ಬೆಂಗಳೂರು, ಜು.2: ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ಸೊಂದು ಹೆಜಮಾಡಿ ಶ್ರೀ ಬ್ರಹ್ಮ ಬೈದರ್ಕಳ ಗರಡಿಯ ಎದುರು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಮರಿಗೆ ಬಿದ್ದ ಘಟನೆ ಶನಿವಾರ ಮಧ್ಯಾಹ್ನ ಸಂಭವಿಸಿದೆ.

ಈ ಖಾಸಗಿ ವೇಗದೂತ ಬಸ್ ಉಡುಪಿಯಿಂದ ಮಂಗಳೂರಿಗೆ ತೆರಳುತ್ತಿತ್ತು ಎಂದು ತಿಳಿದುಬಂದಿದೆ. ಕೆಲವು ಘಟನೆಯಲ್ಲಿ ಸಣ್ಣಪುಟ್ಟ ಗಾಯಗಳನ್ನು ಹೊರತುಪಡಿಸಿ ಯಾವುದೇ ಸಾವು ನೋವು ಸಂಭವಿಸಿಲ್ಲ.

ಹೆಜಮಾಡಿ ಟೋಲ್ ಸುರಕ್ಷತಾ ಅಧಿಕಾರಿ ಶೈಲೇಶ್ ಶೆಟ್ಟಿ, ಟೋಲ್ ಸಿಬ್ಬಂದಿ  ಘಟನಾ ಸ್ಥಳಕ್ಕೆ ಆಗಮಿಸಿ ಪ್ರಯಾಣಿಕರನ್ನು ಸುರಕ್ಷಿತವಾಗಿ ಹೊರಕ್ಕೆ ಕರೆತಂದಿದ್ದಾರೆ.

ಪಡುಬಿದ್ರೆ ಠಾಣಾಧಿಕಾರಿ ಪುರುಷೋತ್ತಮ ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News