ಮಣಿಪಾಲ: ಹಣ ದುರುಪಯೋಗದ ವಿರುದ್ಧ ಕಾರ್ಮಿಕರ ಪ್ರತಿಭಟನೆ
Update: 2022-07-07 16:31 GMT
ಮಣಿಪಾಲ, ಜು.೭: ಕಾರ್ಮಿಕ ಕಲ್ಯಾಣ ಮಂಡಳಿಯಲ್ಲಿ ಹಣದ ದುರುಪ ಯೋಗವಾಗುತಿದ್ದು, ರಾಜ್ಯ ಕಾರ್ಮಿಕ ಸಚಿವ ಹಾಗೂ ಕಾರ್ಮಿಕ ಆಯುಕ್ತ ರನ್ನು ವಜಾಗೊಳಿಸುವಂತೆ ಆಗ್ರಹಿಸಿ ಇಂದು ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಯಿತು.
ಸುರಿಯುವ ಮಳೆಯ ನಡುವೆ ನಡೆದ ಪ್ರತಿಭಟನೆಯಲ್ಲಿ ಸುಮಾರು ೧೦೦ ಮಂದಿ ಕಟ್ಟಡ ಕಾರ್ಮಿಕರು ಭಾಗವಹಿಸಿದ್ದರು. ಕಾರ್ಮಿಕ ಅಧಿಕಾರಿ ಕುಮಾರ್ ಜಿಲ್ಲಾಧಿಕಾರಿ ಪರವಾಗಿ ಮನವಿ ಸ್ವೀಕರಿಸಿದರು.
ಜಿಲ್ಲಾ ಕಟ್ಟಡ ಸಂಘದ ಅಧ್ಯಕ್ಷ ಶೇಖರ ಬಂಗೇರಾ, ಕಾರ್ಯದರ್ಶಿ ಬಾಲಕೃಷ್ಣ ಶೆಟ್ಟಿ, ಉಪಾಧ್ಯಕ್ಷ ಶಶಿಧರ ಗೊಲ್ಲ ಮಾತನಾಡಿದರು. ಉಪಾಧ್ಯಕ್ಷ ರಾಮ ಕಾರ್ಕಡ ವಂದಿಸಿದರು. ಪದಾಧಿಕಾರಿಗಳಾದ ಸುಭಾಸ್ ನಾಯಕ್, ವಾಮನ ಪೂಜಾರಿ, ಉದಯ ಪೂಜಾರಿ, ಸುಂದರ ಕೋಟ್ಯಾನ್, ಮುಖಂಡರಾದ ರಂಗನಾಥ್, ಸಯ್ಯದ್, ಪಿಯೂಸ್ ಡಿ’ ಸೋಜಾ, ಶ್ರೀಧರ ಶೆಟ್ಟಿ ಮುಂತಾದವರು ಭಾಗವಹಿಸಿದ್ದರು