ಹೈದರಾಬಾದ್: ಭಾರೀ ಮಳೆಯಿಂದ ಗೋಡೆ ಕುಸಿದು ತಾಯಿ, ಮಗಳು ಮೃತ್ಯು

Update: 2022-07-09 04:22 GMT
Photo:PTI

ಹೈದರಾಬಾದ್: ತೆಲಂಗಾಣದ ನಲ್ಗೊಂಡದಲ್ಲಿ ಸುರಿದ ಭಾರೀ ಮಳೆಗೆ ಗೋಡೆ ಕುಸಿದು ಮಹಿಳೆ ಹಾಗೂ ಅವರ ಮಗಳು ಸಾವನ್ನಪ್ಪಿದ್ದಾರೆ. ಈ  ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ರಾಜ್ಯಕ್ಕೆ ರೆಡ್ ಅಲರ್ಟ್ ಘೋಷಿಸಿದೆ.

 ಇಂದು ರಾಜ್ಯದ 14 ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಎಚ್ಚರಿಕೆ ನೀಡಿದೆ.

ಏತನ್ಮಧ್ಯೆ, ಮಳೆಯಿಂದಾಗಿ ಹೈದರಾಬಾದ್‌ನಲ್ಲಿ ವಾಹನ ಸಂಚಾರಕ್ಕೆ ತೊಂದರೆ ಯಾಗಿದೆ. ರಾಜ್ಯದಲ್ಲಿ ನೈರುತ್ಯ ಮುಂಗಾರು ಚುರುಕಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕೊಮಾರಂ ಭೀಮ್ ಆಸಿಫಾಬಾದ್, ಮಂಚೇರಿಯಲ್, ನಿರ್ಮಲ್, ನಿಝಾಮಾಬಾದ್, ಮುಲುಗು, ಭದ್ರಾದ್ರಿ ಕೊತಗುಡೆಂ, ಮಹಬೂಬಾಬಾದ್, ವಾರಂಗಲ್ (ಗ್ರಾಮೀಣ), ಹಾಗೂ  ವಾರಂಗಲ್ (ನಗರ) ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯನ್ನು ರೆಡ್ ಅಲರ್ಟ್ ಇಂದು ಸೂಚಿಸಿದೆ.

ಶುಕ್ರವಾರ ಹಾಗೂ  ಶನಿವಾರ ಆದಿಲಾಬಾದ್, ನಿರ್ಮಲ್, ನಿಝಾಮಾಬಾದ್, ರಾಜಣ್ಣ ಸಿರ್ಸಿಲ್ಲಾ ಹಾಗೂ  ಸಿದ್ದಿಪೇಟೆ ಜಿಲ್ಲೆಗಳಿಗೆ ನಿನ್ನೆ ರೆಡ್ ಅಲರ್ಟ್ ಘೋಷಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News