ಸಮುದ್ರದಲ್ಲಿ ಟಾರ್‌ ಬಾಲ್‌ಗಳ ಮಾಲಿನ್ಯದ ಬಗ್ಗೆ ಸಂಶೋಧನೆ: ವಿಜ್ಞಾನಿ ಡಾ.ಶೆಣೈ

Update: 2022-07-12 11:54 GMT

ಶಿರ್ವ, ಜು.೧೨: ರಾಷ್ಟ್ರೀಯ ಸಮುದ್ರ ವಿಜ್ಞಾನ ಸಂಸ್ಥಾನವು(ಸಿಎಸ್‌ಐರ್ -ಎನ್‌ಐಒ) ಆಳ ಸಾಗರ ಗಣಿಗಾರಿಕೆಯ ಸಾಧ್ಯತೆಗಳ ಬಗ್ಗೆ ನಿರಂತರ ಸಂಶೋಧನೆಯಲ್ಲಿ ತೊಡಗಿದೆ. ಟಾರ್‌ಬಾಲ್‌ಗಳಿಂದ ಕರಾವಳಿಯಲ್ಲಿ ಉಂಟಾ ಗುತ್ತಿರುವ ಮಾಲಿನ್ಯದ ಬಗ್ಗೆ ಮತ್ತು ಸೂಕ್ಷ್ಮಜೀವಿಗಳಿಂದ ಅವುಗಳನ್ನು ನಿರ್ವಿಷಗೊಳಿಸುವ ನಿಟ್ಟಿನಲ್ಲಿಯೂ ವ್ಯಾಪಕ ಸಂಶೋಧನೆ ಪ್ರಗತಿಯಲ್ಲಿದೆ ಎಂದು ರಾಷ್ಟ್ರೀಯ ಸಮುದ್ರ ವಿಜ್ಞಾನ ಸಂಸ್ಥಾನದ ವಿಶಾಖಪಟ್ಟಣ ಪ್ರಾದೇಶಿಕ ಕೇಂದ್ರದ ಪ್ರಧಾನ ವಿಜ್ಞಾನಿ ಡಾ.ಬೆಳ್ಳೆ ದಾಮೋದರ ಶೆಣೈ ತಿಳಿಸಿದ್ದಾರೆ.  

ಕನ್ನಡ ಸಾಹಿತ್ಯ ಪರಿಷತ್ ಕಾಪು ತಾಲ್ಲೂಕು ಘಟಕದ ವತಿಯಿಂದ ಇನ್ನಂಜೆ ಎಸ್.ವಿ.ಎಚ್. ಪದವಿಪೂರ್ವ ಕಾಲೇಜಿನಲ್ಲಿ ಸೋಮವಾರ ನಡೆದ ಹಮ್ಮಿಕೊಳ್ಳ ಲಾದ ವಿಜ್ಞಾನ ಲೋಕದಲ್ಲಿ ಕನ್ನಡ ಸಾಧಕನ ಪಯಣ ಉಪನ್ಯಾಸ ಕಾರ್ಯ ಕ್ರಮದಲ್ಲಿ ಅವರು ಮಾತನಾಡುತಿದ್ದರು.

ಅಧ್ಯಕ್ಷತೆ ವಹಿಸಿದ್ದ ಕನ್ನಡ ಸಾಹಿತ್ಯ ಪರಿಷತ್ ಕಾಪು ತಾಲೂಕು ಅಧ್ಯಕ್ಷ ಬಿ. ಪುಂಡಲೀಕ ಮರಾಠೆ ಮಾತನಾಡಿ, ಗ್ರಾಮೀಣ ಮತ್ತು ಕನ್ನಡ ಮಾಧ್ಯಮದಿಂದ ಬಂದ ವಿದ್ಯಾರ್ಥಿಗಳು ವೈಜ್ಞಾನಿಕ ಮತ್ತು ಸಕಾರಾತ್ಮಕ ಮನೋಭಾವ ಬೆಳೆಸಿ ಕೊಂಡು, ಸೋಲನ್ನು ಎದುರಿಸಿ ಮುನ್ನಡೆದಲ್ಲಿ ಯಶಸ್ಸು ಸಾಧಿಸಬಹುದು ಎಂದು ಹೇಳಿದರು.

ಕಾಲೇಜಿನ ಆಡಳಿತಾಧಿಕಾರಿ ಅನಂತ ಮೂಡಿತ್ತಾಯ ಸ್ವಾಗತಿಸಿ, ಪ್ರಾಸ್ತಾವಿಕ ವಾಗಿ ಮಾತನಾಡಿದರು. ಪ್ರಾಂಶುಪಾಲ ಪುಂಡರೀಕಾಕ್ಷ ಕೊಡಂಚ ಅತಿಥಿಗಳನ್ನು ಪರಿಚಯಿಸಿದರು. ಕಸಾಪ ಕಾರ್ಯದರ್ಶಿ ಅಶ್ವಿನ್ ಲಾರೆನ್ಸ್ ಮೂಡುಬೆಳ್ಳೆ ವಂದಿಸಿದರು. ಕಸಾಪ ಕೋಶಾಧಿಕಾರಿ ವಿದ್ಯಾಧರ ಪುರಾಣಿಕ್, ಕಾರ್ಯಕಾರಿ ಸಮಿತಿ ಸದಸ್ಯರಾದ ಮಧುಕರ್ ಎಸ್.,  ಡಿಆರ್ ನೊರೋನ್ಹಾ, ಶಿಕ್ಷಕ ಸತೀಶ್ ನಾಯಕ್ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News