ಚುನಾವಣೆಯಲ್ಲಿ ಸೋತ ನಂತರ ಕೊಟ್ಟ ಹಣ ಹಿಂತಿರುಗಿಸುವಂತೆ ಜನರಿಗೆ ಬೆದರಿಕೆ: ಅಭ್ಯರ್ಥಿ ವಿರುದ್ಧ ಪ್ರಕರಣ

Update: 2022-07-13 11:03 GMT

ನೀಮಚ್: ಮಧ್ಯಪ್ರದೇಶದ ನೀಮಚ್ ಜಿಲ್ಲೆಯಲ್ಲಿ ಚುನಾವಣೆ ವೇಳೆ ಹಂಚಿಕೆ ಮಾಡಿದ್ದ ಹಣವನ್ನು ಹಿಂದಿರುಗಿಸುವಂತೆ ಜನರಿಗೆ ಬೆದರಿಕೆ ಹಾಕಿದ ಆರೋಪದ ಮೇಲೆ ಪಂಚಾಯತಿ ಚುನಾವಣೆಯಲ್ಲಿ ಸೋತ ಅಭ್ಯರ್ಥಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.

ಮಾನಸ ತಹಸಿಲ್‌ನ ದೇವರಾನ್ ಗ್ರಾಮ ಪಂಚಾಯತ್‌ನ ಸರಪಂಚ್ ಹುದ್ದೆಗೆ ನಡೆದ ಚುನಾವಣೆಯಲ್ಲಿ ಸೋತ ನಂತರ ಹಣವನ್ನು ಹಿಂದಿರುಗಿಸುವಂತೆ  ರಾಜು ಡೇಮಾ ಎಂದು ಗುರುತಿಸಲಾದ ವ್ಯಕ್ತಿ ಜನರಿಗೆ  ಬೆದರಿಕೆ ಹಾಕುತ್ತಿರುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡ ನಂತರ ಮಂಗಳವಾರ ಪ್ರಕರಣ ದಾಖಲಿಸಲಾಗಿದೆ ಎಂದು  ಅಧಿಕಾರಿಯೊಬ್ಬರು ಹೇಳಿದರು.

ದಯ್ಮಾ ಹಾಗೂ  ಆತನ ಸಹಚರ ಕನ್ಹಯ್ಯಾ ಬಂಜಾರಾ ವಿರುದ್ಧ ಐಪಿಸಿಯ ಸೆಕ್ಷನ್ 323 (ಸ್ವಯಂಪ್ರೇರಿತವಾಗಿ ನೋವುಂಟು ಮಾಡುವುದು), 294 (ಅಶ್ಲೀಲ ಕೃತ್ಯ) ಹಾಗೂ  506 (ಕ್ರಿಮಿನಲ್ ಬೆದರಿಕೆ) ಅಡಿಯಲ್ಲಿ ರಾಂಪುರ ಪೊಲೀಸ್ ಠಾಣೆಯಲ್ಲಿ ಜನರಿಗೆ ಬೆದರಿಕೆ ಹಾಗೂ  ಥಳಿಸಿದ ಆರೋಪವನ್ನು ದಾಖಲಿಸಲಾಗಿದೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ (ಎಎಸ್ಪಿ) ಸುಂದರ್ ಸಿಂಗ್ ಕಾಲೇಶ್ ಹೇಳಿದರು.

ಹಣವನ್ನು ಹಿಂದಿರುಗಿಸುವಂತೆ ಆರೋಪಿಗಳು ಜನರಿಗೆ ಬೆದರಿಕೆ ಹಾಕುತ್ತಿರುವುದನ್ನು ವೀಡಿಯೊ ತೋರಿಸುತ್ತದೆ, ಬಹುಶಃ ಕಳೆದ ವಾರ ವೀಡಿಯೊವನ್ನು ಚಿತ್ರೀಕರಿಸಲಾಗಿದೆ ಎಂದು ಅವರು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News