ಬಾಲಕನ ಪೋಷಕರ ಪತ್ತೆಗೆ ಸೂಚನೆ
Update: 2022-07-16 14:07 GMT
ಉಡುಪಿ: ನಗರದ ಇಂದ್ರಾಳಿ ರೈಲ್ವೆ ನಿಲ್ದಾಣದಲ್ಲಿ ಅನಾಥವಾಗಿ ಸಿಕ್ಕಿದ್ದ ಅಶ್ರಫ್ ಅನ್ಸಾರ್ (16) ಎಂಬ ಬಾಲಕನನ್ನು ರಕ್ಷಣೆ ಮಾಡಿ ಪುನರ್ವಸತಿ ಕಲ್ಪಿಸಲಾಗಿದ್ದು, ಬಾಲಕನ ಪೋಷಕರು ಅಥವಾ ವಾರಸುದಾರರು ಯಾರಾದರೂ ಇದ್ದಲ್ಲಿ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳ ಕಚೇರಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ರಜತಾದ್ರಿ, ಮಣಿಪಾಲ ದೂ.ಸಂಖ್ಯೆ: ೦೮೨೦-೨೫೭೪೯೬೪ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.