ಬೂದು ನೀರು ನಿರ್ವಹಣೆ ಕುರಿತ ಕಿರುಚಿತ್ರ ನಿರ್ಮಾಣ ಸ್ಪರ್ಧೆ

Update: 2022-07-16 15:26 GMT

ಉಡುಪಿ : ಜಿಲ್ಲಾಪಂಚಾಯತ್‌ನ ಸ್ವಚ್ಛ ಭಾರತ್ ಮಿಷನ್ (ಗ್ರಾ) ಯೋಜನೆಯಡಿ ಗ್ರಾಮೀಣ ಭಾಗದ ಜನವಸತಿ ಪ್ರದೇಶಗಳಲ್ಲಿ ಬೂದು ನೀರು ನಿರ್ವಹಣೆ ಕುರಿತು ಸಾರ್ವಜನಿಕರಿಗೆ ಅರಿವು ಮೂಡಿಸುವ ಸಲುವಾಗಿ ಜೀವ ಜಲ-ಜಲ ನಿಧಿ ವಿಷಯದ ಬಗ್ಗೆ ಕಿರುಚಿತ್ರ ನಿರ್ಮಾಣ ಸ್ಪರ್ಧೆಯನ್ನು ಕನ್ನಡ, ತುಳು ಹಾಗೂ ಆಂಗ್ಲ ಭಾಷೆಯಲ್ಲಿ ಆಯೋಜಿಸಲಾಗಿದೆ.

ಸಿದ್ಧಪಡಿಸಿದ ವೀಡಿಯೋಗಳನ್ನು ಸ್ವಚ್ಛ ಭಾರತ್ ಮಿಷನ್ (ಗ್ರಾ) ಇ-ಮೇಲ್ -nbaudp@gmail.com-ಗೆ  ಸಲ್ಲಿಸಲು ಆಗಸ್ಟ್ ೧೮ ಕೊನೆಯ ದಿನ. ಪ್ರಶಸ್ತಿ ಯು ನಗದು ಬಹುಮಾನವನ್ನು ಒಳಗೊಂಡಿರುತ್ತದೆ.

ಹೆಚ್ಚಿನ ಮಾಹಿತಿಗಾಗಿ ಮೊ.ನಂ: ೯೯೬೪೪೪೩೦೬೪ ಅನ್ನು ಸಂಪರ್ಕಿಸ ಬಹುದು ಎಂದು ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಹಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News