ರಾಷ್ಟ್ರಪತಿ ಚುನಾವಣೆ: ಲೋಕಸಭೆಯ ಕಲಾಪ ಮಧ್ಯಾಹ್ನ 2.00 ಗಂಟೆಗೆ ಮುಂದೂಡಿಕೆ

Update: 2022-07-18 06:39 GMT
Photo:PTI

ಹೊಸದಿಲ್ಲಿ: ಭಾರತದ 15 ನೇ ರಾಷ್ಟ್ರಪತಿ ಆಯ್ಕೆಗಾಗಿ ನಡೆಯುತ್ತಿರುವ ಮತದಾನದ ಕಾರಣದಿಂದಾಗಿ ಲೋಕಸಭೆಯ ಕಲಾಪವನ್ನು ಮಧ್ಯಾಹ್ನ 2.00 ಗಂಟೆಗೆ ಮುಂದೂಡಲಾಗಿದೆ.

ಸದನದ ಕಲಾಪವನ್ನು ನಂತರ ಆರಂಭಿಸಲಾಗುವುದು ಎಂದು ಸ್ಪೀಕರ್ ಓಂ ಬಿರ್ಲಾ ತಿಳಿಸಿದ್ದಾರೆ.

ಲೋಕಸಭೆಯ ಸ್ಪೀಕರ್‌ಗಳು ಮಾಜಿ ಸಂಸದರಿಗೆ ಶ್ರದ್ಧಾಂಜಲಿ ಸಲ್ಲಿಸಿ, ಸಂತಾಪವನ್ನು ಓದಿದರು. ಸದನದ ಸದಸ್ಯರು ಎರಡು ನಿಮಿಷ ಮೌನ ಆಚರಿಸಿ ಶ್ರದ್ಧಾಂಜಲಿ ಸಲ್ಲಿಸಿದರು

ಯುಎಇ ಮಾಜಿ ಅಧ್ಯಕ್ಷ ಶೇಖ್ ಖಲೀಫಾ ಬಿನ್ ಝಾಯೆದ್ ಅಲ್ ನಹ್ಯಾನ್  ಹಾಗೂ  ಕೀನ್ಯಾ ಮಾಜಿ ಅಧ್ಯಕ್ಷ ಮ್ವೈ ಕಿಬಾಕ್ ಅವರಿಗೆ ಲೋಕಸಭೆ ಸ್ಪೀಕರ್ ಗೌರವ ಸಲ್ಲಿಸಿದರು. 

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರು ಜುಲೈ 8 ರಂದು ನಾರಾದಲ್ಲಿ ಪ್ರಚಾರ ರ್ಯಾಲಿಯಲ್ಲಿ ಹತ್ಯೆಗೀಡಾದ ಜಪಾನ್ ಮಾಜಿ ಪ್ರಧಾನಿ ಶಿಂಝೊ ಅಬೆ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದರು  2007 ರಲ್ಲಿ ತಮ್ಮ ಭೇಟಿಯ ಸಂದರ್ಭದಲ್ಲಿ ಅಬೆ ಅವರು ಭಾರತದ ಸಂಸತ್ತಿನಲ್ಲಿ ಮಾಡಿದ ಭಾಷಣವನ್ನು ಬಿರ್ಲಾ ಅವರು ನೆನಪಿಸಿಕೊಂಡರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News