ಉಡುಪಿ: ಎಸ್‌ಡಿಎಂನಲ್ಲಿ 23ನೇ ಶಿಷ್ಯೋಪನಯನ ಸಮಾರಂಭ

Update: 2022-07-19 15:36 GMT

ಉದ್ಯಾವರ : ಕುತ್ಪಾಡಿಯಲ್ಲಿರುವ ಶ್ರೀಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಮಹಾದ್ಯಾಲಯದ ೨೩ನೇ ಶಿಷ್ಯೋಪನಯನ ಸಮಾರಂಭ ಇತ್ತೀಚೆಗೆ ಕಾಲೇಜಿನಲ್ಲಿ ನಡೆಯಿತು. 

ಮೊದಲಿಗೆ ಮುಂಜಾನೆ ಸಮಯದಲ್ಲಿ ಧನ್ವಂತರಿ ಹೋಮ ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಪೋಷಕರ ಸಮಕ್ಷಮದಲ್ಲಿ ನೆರವೇರಿತು. ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ ಮಂಗಳೂರು ರಾಮಕೃಷ್ಣ ತಪೋವನ ಪೊಳಲಿ ಇಲ್ಲಿನ ಸ್ವಾಮಿ ವಿವೇಕ ಚೈತನ್ಯಾನಂದಜೀ ವಿದ್ಯಾರ್ಥಿಗಳನ್ನು ದ್ದೇಶಿಸಿ ಮಾತನಾಡಿ, ಜೀವನದಲ್ಲಿ ಆಧ್ಯಾತ್ಮಿಕ ತತ್ವಗಳನ್ನು ಅಳವಡಿಸಿಕೊಂಡಲ್ಲಿ ಸರ್ವತೋಮುಖ ಅಭಿವೃದ್ಧಿಯಾಗುವುದು. ಆದರ್ಶ ವ್ಯಕ್ತಿಗಳಾದ ಶ್ರೀ ರಾಮಕೃಷ್ಣ ಪರಮಹಂಸ, ಸ್ವಾಮಿ ವೇಕಾನಂದರ ಜೀವನ ಶೈಲಿ ಹಾಗೂ ತತ್ವಗಳನ್ನು ಪಾಲಿಸುವಂತೆ ಸೂಚಿಸಿದರು. 

ಅಧ್ಯಕ್ಷತೆ ವಹಿಸಿದ್ದ ನೂತನವಾಗಿ ನೇಮಕಗೊಂಡ ಎಸ್‌ಡಿಎಂ ಎಜ್ಯುಕೇಶನಲ್ ಸೊಸಾಟಿಯ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಎಸ್. ಇವರನ್ನು ಕಾಲೇಜಿನ ವತಿಯಿಂದ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಉನ್ನತ ಶಿಕ್ಷಣದ ಮಹತ್ವವನ್ನು ವಿದ್ಯಾರ್ಥಿಗಳಿಗೆ ತಿಳಿಸಿದರು. ಅತ್ಯುತ್ತಮ ವೈದ್ಯರಾಗಿ ಸಮಾಜಕ್ಕೆ ಕೊಡುಗೆಯನ್ನು ನೀಡಬೇಕೆಂದು ಕರೆ ನೀಡಿದರು. 

ಇದೇ ಸಂದರ್ಭದಲ್ಲಿ ಪಂಚಕರ್ಮ ವಿಭಾಗದ ಸಹಪ್ರಾಧ್ಯಾಪಕರಾದ ಡಾ. ಪದ್ಮಕಿರಣ್ ಸಿ. ಅವರ ಪುಸ್ತಕವನ್ನು ಬಿಡುಗಡೆಗೊಳಿಸಲಾಯಿತು. ಸ್ನಾತಕೋತ್ತರ ವಿಭಾಗದ ಉಪ ಮುಖ್ಯಸ್ಥೆ ಡಾ.ಸುಚೇತ ಕುಮಾರಿ, ಸಹಾಯಕ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಡಾ.ಚೈತ್ರಾ ಹೆಬ್ಬಾರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. 

ಕಾಲೇಜಿನ ಪ್ರಾಂಶುಪಾಲರಾದ ಡಾ. ಮಮತಾ ಕೆ.ವಿ. ಎಲ್ಲರನ್ನು ಸ್ವಾಗತಿಸಿ, ಪ್ರಾಸ್ತಾವಿಕ ನುಡಿಗಳನ್ನಾಡಿದರು. ಸಹಾಯಕ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಡಾ. ರವೀಂದ್ರ ಅಂಗಡಿ ಸಂದೇಶ ವಾಚನ ಮಾಡಿದರು.  ವಿದ್ಯಾರ್ಥಿ ಕ್ಷೇಮ ಪಾಲನಾಧಿಕಾರಿ ಡಾ. ವೀರಕುಮಾರ ಕೆ. ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ಬೋಧನೆ  ನೆರವೇರಿಸಿ ದರು. ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ.ನಾಗರಾಜ್ ಎಸ್. ವಂದಿಸಿದರು. ಸಹಾಯಕ ಪ್ರಾಧ್ಯಾಪಕಿ ಡಾ.ಮಹಾಲಕ್ಷ್ಮಿ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News