ನ್ಯಾಷನಲ್ ಇ-ಸ್ಕಾಲರ್‌ಶಿಪ್‌ಗೆ ಅರ್ಜಿ ಆಹ್ವಾನ

Update: 2022-07-21 15:17 GMT

ಉಡುಪಿ : ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಕೇಂದ್ರ ಸರಕಾರದ ನ್ಯಾಷನಲ್ ಇ ಸ್ಕಾಲರ್‌ಶಿಪ್ ಯೋಜನೆಯಡಿ ವಿಕಲಚೇತನ ವಿದ್ಯಾರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಪ್ರಿ-ಮೆಟ್ರಿಕ್ ವಿದ್ಯಾರ್ಥಿಗಳಿಗೆ ಸೆಪ್ಟಂಬರ್ ೩೦, ಪೋಸ್ಟ್ ಮೆಟ್ರಿಕ್ ಹಾಗೂ ಟಾಪ್ ಕ್ಲಾಸ್‌ಗಳಿಗೆ ಅಕ್ಟೋಬರ್‌೩೧ ಕೊನೆಯ ದಿನವಾಗಿದೆ.  ಅರ್ಜಿ ನಮೂನೆ  ಹಾಗೂ ಹೆಚ್ಚಿನ ಮಾಹಿತಿಗಳಿಗಾಗಿ ವೆಬ್‌ಸೈಟ್ -www.disabilityaffairs.gov.in, www.scholarships.gov.in- ಅಥವಾ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಜಿಲ್ಲಾಧಿಕಾರಿ ಕಛೇರಿ ಸಂಕೀರ್ಣ, ರಜತಾದ್ರಿ, ಮಣಿಪಾಲ ದೂರವಾಣಿ ಸಂಖ್ಯೆ:೦೮೨೦-೨೫೭೪೮೧೦, ೨೫೭೪೮೧೧ಅನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News