ಕಾರ್ಮಿಕರ ಮಕ್ಕಳ ವಿವರ ಸಲ್ಲಿಸಲು ಸೂಚನೆ

Update: 2022-07-27 17:51 IST
ಕಾರ್ಮಿಕರ ಮಕ್ಕಳ ವಿವರ ಸಲ್ಲಿಸಲು ಸೂಚನೆ
ಸಾಂದರ್ಭಿಕ ಚಿತ್ರ
  • whatsapp icon

ಉಡುಪಿ : ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಬೆಂಗಳೂರು ಇವರ ವತಿಯಿಂದ ಪ್ರಸಕ್ತ ಸಾಲಿನಲ್ಲಿ ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳಿಗೆ ವಿವಿಧ ಯೋಜನೆಗಳನ್ನು ಮಂಡಳಿ ವತಿಯಿಂದ ಕೈಗೊಳ್ಳುವ ಸಲುವಾಗಿ ಒಂದರಿಂದ ೧೦ನೇ ತರಗತಿವರೆಗೆ ವ್ಯಾಸಂಗ ಮಾಡುತ್ತಿರುವ ಕಾರ್ಮಿಕರ ಮಕ್ಕಳ ಮಾಹಿತಿಯನ್ನು ತಾಲೂಕು ಕಾರ್ಮಿಕ ನಿರೀಕ್ಷಕರ ಕಚೇರಿಗೆ ಆಗಸ್ಟ್ 3ರ ಒಳಗೆ ಸಲ್ಲಿಸುವಂತೆ ಜಿಲ್ಲಾ ಕಾರ್ಮಿಕ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News