ಉಡುಪಿ: ವಿಶ್ವ ಮಾನವ ಕಳ್ಳ ಸಾಗಾಣಿಕೆ ತಡೆ ದಿನಾಚರಣೆ

Update: 2022-07-31 14:16 GMT

ಉಡುಪಿ: ಚೈಲ್ಡ್ ಲೈನ್-1098 ಉಡುಪಿ ವತಿಯಿಂದ ವಿಶ್ವ ಮಾನವ ಕಳ್ಳ ಸಾಗಣಿಕೆ ತಡೆ ದಿನಾಚರಣೆಯ ಪ್ರಯುಕ್ತ ಇಂದಿರಾ ನಗರ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಮಕ್ಕಳ ಕಳ್ಳ ಸಾಗಾಣಿಕೆಯ ಕುರಿತು ಅರಿವು ಕಾರ್ಯಕ್ರಮವನ್ನು ಶನಿವಾರ ಆಯೋಜಿಸಲಾಗಿತ್ತು.

ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ರೈಲ್ವೆ ರಕ್ಷಣಾ ಪಡೆ ಇನ್ಸ್ ಪೆಕ್ಟರ್ ಪಿ.ವಿ ಮದುಸೂದನ್ ವಿದ್ಯಾರ್ಥಿಗಳಿಗೆ ಮಕ್ಕಳ ಕಳ್ಳ ಸಾಗಾಣಿಕೆಯಿಂದಾಗುವ ದುಷ್ಪರಿಣಾಮಗಳ ಬಗ್ಗೆ ಅರಿವನ್ನು ಮೂಡಿಸಿದರು. ಮಕ್ಕಳು ಕಡ್ಡಾಯವಾಗಿ ಶಿಕ್ಷಣ ವನ್ನು ಪಡೆಯಬೇಕು. ತಮ್ಮನ್ನು ತಾವು ವ್ಯಕ್ತಿತ್ವ ವಿಕಸನಕ್ಕೆ ಪೂರಕವಾಗುವಂತಹ ವಿಷಯಗಳಲ್ಲಿ ತೊಡಗಿಸಿಕೊಳ್ಳುವಂತೆ ತಿಳಿ ಹೇಳಿದರು.

ಅಲ್ಲದೇ ಮಕ್ಕಳಿಗೆ ಯಾವುದೇ ರೀತಿಯಾದ ಸಮಸ್ಯೆಯಾದಲ್ಲಿ ಚೈಲ್ಡ್ ಲೈನ್ 1098 ಅಥವಾ ಪೋಲಿಸರಿಗೆ ಕರೆ ಮಾಡಿ ಸಹಾಯವನ್ನು ಪಡೆಯಲು ತಿಳಿಸಿದರು. ಪ್ರೌಢಶಾಲೆ ಮುಖ್ಯೋಪಾಧ್ಯಾಯರು ಮಕ್ಕಳು ಅಪರಿಚಿತರ ಬಗ್ಗೆ ಸದಾ ಎಚ್ಚರದಿಂದ ಇರಬೇಕು ಎಂದು ತಿಳಿಸಿದರು.

ರೈಲ್ವೆ ರಕ್ಷಣಾ ಪಡೆ ಉಡುಪಿ ಸಿಬ್ಬಂದಿ ಸಜೀರ್, ಶಾಲಾ ಶಿಕ್ಷಕ ವೃಂದದವರು, ಚೈಲ್ಡ್‌ ಲೈನ್-1098 ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಚೈಲ್ಡ್ ಲೈನ್-1098 ನಿರ್ದೇಶಕ ರಾಮಚಂದ್ರ ಉಪಾಧ್ಯಾಯ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಂಯೋಜಕಿ ಜ್ಯೋತಿ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News