ಭಾರೀ ಮಳೆ; ಇಂದು ಕುಂದಾಪುರ, ಬೈಂದೂರು ತಾಲೂಕಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

Update: 2022-08-02 04:07 GMT

ಕುಂದಾಪುರ: ಉಡುಪಿ ಜಿಲ್ಲೆಯ ಕುಂದಾಪುರ ಮತ್ತು ಬೈಂದೂರು ತಾಲೂಕಿನಲ್ಲಿ ಕಳೆದ ರಾತ್ರಿಯಿಂದ ಭಾರಿ ಮಳೆಯಾಗುತ್ತಿದ್ದು ಪ್ರವಾಹ ಪರಿಸ್ಥಿತಿ ಎದುರಾಗಿರುವ ಹಿನ್ನಲೆಯಲ್ಲಿ ಎರಡೂ ತಾಲೂಕಿನ ಎಲ್ಲಾ ಶಾಲಾ ಕಾಲೇಜುಗಳಿಗೆ ಮಂಗಳವಾರ (ಆ 2) ರಜೆ ಘೋಷಣೆ ಮಾಡಿ ಕುಂದಾಪುರ ಸಹಾಯಕ ಕಮೀಷನರ್ ರಾಜು  ಕೆ. ಆದೇಶ ಹೊರಡಿಸಿದ್ದಾರೆ.

ಸೋಮವಾರ ಮಧ್ಯಾಹ್ನದಿಂದ ಎರಡೂ ತಾಲೂಕಿನಲ್ಲಿ ನಿರಂತರ ಮಳೆಯಾಗುತ್ತಿರುವುದರಿಂದ ತಗ್ಗು ಪ್ರದೇಶಗಳು ಪ್ರವಾಹ ಪರಿಸ್ಥಿತಿ ಎದುರಿಸುತ್ತಿದ್ದು ಈ ನಿಟ್ಟಿನಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ರಜೆಯನ್ನು ಘೋಷಣೆ ಮಾಡಲಾಗಿದೆ ಎಂದು ತಿಳಿದುಬಂದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News