ಮಣಿಪಾಲ ಕೆಎಂಸಿಯಲ್ಲಿ ಮಕ್ಕಳ ಅಸ್ಥಿಮಜ್ಜೆ ಕಸಿ ಸೌಲಭ್ಯ ಯಶಸ್ವಿ

Update: 2022-08-05 13:58 GMT

ಉಡುಪಿ, ಆ.5: ಮಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಮಪಾಲದ ಸಮಗ್ರ ಕ್ಯಾನ್ಸರ್ ಆರೈಕೆ ಕೇಂದ್ರದ ಭಾಗವಾಗಿರುವ ಮಕ್ಕಳ ರಕ್ತಶಾಸ್ತ್ರ ಮತ್ತು ಆಂಕೊಲಾಜಿ ವಿಭಾಗವು ಮಕ್ಕಳ ಅಸ್ಥಿಮಜ್ಜೆ ಕಸಿ ಸೌಲಭ್ಯದ ಯಶಸ್ಸನ್ನು ಆಚರಿಸುವ ಕಾರ್ಯಕ್ರಮ ಬುಧವಾರ ಓಶಿಯನ್ ಪರ್ಲ್‌ನಲ್ಲಿ ನಡೆಯಿತು.

ಮಕ್ಕಳ ಅಸ್ಥಿಮಜ್ಜೆ ಕಸಿ ಕ್ಲಿನಿಕ್‌ನ ಮಾಹಿತಿ ಕರಪತ್ರಗಳನ್ನು ಬಿಡುಗಡೆ ಗೊಳಿಸಿದ ಮಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ ಡೀನ್ ಡಾ.ಶರತ್ ಕುಮಾರ್ ರಾವ್ ಮಾತನಾಡಿ, ಅಸ್ಥಿಮಜ್ಜೆ ಕಸಿ ವಿವಿಧ ಬಗೆಯ ಕ್ಯಾನ್ಸರ್ ಮತ್ತು ರಕ್ತ ಸಂಬಂಧಿ ಅಸ್ವಸ್ಥತೆಗಳಿಗೆ ಜೀವರಕ್ಷಕ ವಿಧಾನವಾಗಿದೆ. ಇಂತಹ ಸಂಕೀರ್ಣ ವೈದ್ಯಕೀಯ ಚಿಕಿತ್ಸೆಯನ್ನು ಹೊಸದಿಲ್ಲಿ, ಮುಂಬಯಿ, ಚೆನ್ನೈ, ಕೋಲ್ಕತ್ತಾ, ಬೆಂಗಳೂರುಗಳಲ್ಲಿ ಮಾತ್ರ ನಡೆಸಲಾಗುತಿತ್ತು. ಈಗ ಕರಾವಳಿ ಕರ್ನಾಟಕದಲ್ಲಿ ಮೊದಲ ಬಾರಿಗೆ ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಮಣಿ ಪಾಲವು ಮಕ್ಕಳಿಗಾಗಿ ಈ ಸುಸಜ್ಜಿತ ಸೇವೆಗಳನ್ನು ಪ್ರಾರಂಭಿಸಿದೆ ಎಂದರು.

ವೈದ್ಯಕೀಯ ಅಧೀಕ್ಷಕ ಡಾ.ಅವಿನಾಶ್ ಶೆಟ್ಟಿ ಮಾತನಾಡಿದರು. ಈ ಸಂದರ್ಭದಲ್ಲಿ ಪತ್ರಿಕಾ ವರದಿಗಾರರಿಗೆ ಮಣಿಪಾಲ ಆರೋಗ್ಯ ಕಾರ್ಡ್ ವಿತರಿಸ ಲಾಯಿತು. ಮಣಿಪಾಲ ಸಮಗ್ರ ಕ್ಯಾನ್ಸರ್ ಆರೈಕೆ ಕೇಂದ್ರದ ಸಂಯೋಜಕ ಡಾ. ನವೀನ್ ಸಲಿನ್ಸ್ ಉಪಸ್ಥಿತರಿದ್ದರು.

ವಿಭಾಗದ ಸಹಾಯಕ ಪ್ರಾಧ್ಯಾಪಕ ಮತ್ತು ಮಕ್ಕಳ ಅಸ್ಥಿಮಜ್ಜೆ ಕಸಿ ತಜ್ಞ ಡಾ. ವಿನಯ್ ಎಂ.ವಿ. ಮಕ್ಕಳಲ್ಲಿ ಅಸ್ಥಿಮಜ್ಜೆಯ ಕಸಿ ಪ್ರಕ್ರಿಯೆಯ ಕುರಿತು ಅವಲೋಕನ ನೀಡಿದರು. ಸಹ ಪ್ರಾಧ್ಯಾಪಕ ಮತ್ತು ವಿಭಾಗದ ಮುಖ್ಯಸ್ಥ ಡಾ. ವಾಸುದೇವ ಭಟ್ ಕೆ., ವಿಭಾಗದ ಸಹಾಯಕ ಪ್ರಾಧ್ಯಾಪಕಿ ಡಾ.ಅರ್ಚನಾ ಎಂ.ವಿ. ಉಪಸ್ಥಿತರಿದ್ದರು. ಮಾರುಕಟ್ಟೆ ವಿಭಾಗದ ಕೃಷ್ಣಪ್ರಸಾದ್ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News