ಹಿರಿಯ ನಾಗರಿಕರಿಗೆ ರಾಜ್ಯ ಪ್ರಶಸ್ತಿ: ಅರ್ಜಿ ಆಹ್ವಾನ

Update: 2022-08-05 14:51 GMT

ಉಡುಪಿ, ಆ.5: ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ದಿನದಂದು ಹಿರಿಯ ನಾಗರಿಕರ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ವಯೋಶ್ರೇಷ್ಠರಿಗೆ ರಾಜ್ಯ ಪ್ರಶಸ್ತಿ ನೀಡಲು ಜಿಲ್ಲೆಯ ಹಿರಿಯ ನಾಗರಿಕರಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಆಗಸ್ಟ್ 20 ಕೊನೆಯ ದಿನ.ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವಿಕಲಚೇತನರ ಸಬಲೀಕರಣ ಅಧಿಕಾರಿ ಕಚೇರಿ, ರಜತಾದ್ರಿ, ಮಣಿಪಾಲ, ಉಡುಪಿ ದೂ.ಸಂಖ್ಯೆ: 0820-2574810, 2574811ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News