ಕಸಾಪ ಅಲ್ಪಸಂಖ್ಯಾತರ ಪ್ರತಿನಿಧಿಯಾಗಿ ಸರ್ದಾರ್ ಬಲ್ಜಿತ್ ಸಿಂಗ್ ನೇಮಕ

Update: 2022-08-05 17:54 GMT

ಬೆಂಗಳೂರು, ಆ. 5: ಕನ್ನಡಿಗರ ಏಕೈಕ ಪ್ರಾತಿನಿಧಿಕ ಸಂಸ್ಥೆಯಾದ ಕನ್ನಡ ಸಾಹಿತ್ಯ ಪರಿಷತ್ತಿನ 107 ವರ್ಷಗಳ ಇತಿಹಾಸದಲ್ಲಿ ಮೊದಲ ಬಾರಿಗೆ ಪಂಜಾಬ್ ಮೂಲದ ಸಿಖ್ ಧರ್ಮದ ಸರ್ದಾರ್ ಬಲ್ಜಿತ್ ಸಿಂಗ್ ಅವರನ್ನು ಅಲ್ಪಸಂಖ್ಯಾತರಪ್ರತಿನಿಧಿ ಸಿಖ್ ಸಮುದಾಯದ ವ್ಯಕ್ತಿಯೊಬ್ಬರನ್ನು ನೇಮಕ ಮಾಡಲಾಗಿದೆ.

ಸರ್ದಾರ್ ಬಲ್ಜಿತ್ ಸಿಂಗ್ ಅವರು ಮೂಲತಃ ಪಂಜಾಬ್‍ನವರಾಗಿದ್ದು, ಇವರು ಹುಟ್ಟಿದ್ದು ಬೆಂಗಳೂರಿನಲ್ಲಿ. ಹಾಗಾಗಿ ಕನ್ನಡ ಭಾಷೆಯ ಕುರಿತು ಅಪಾರ ಗೌರವವನ್ನು ಹೊಂದಿದ್ದ ಸರ್ದಾರ್ ಬಲ್ಜಿತ್ ಸಿಂಗ್, ಕನ್ನಡವನ್ನು ಕಲಿತು ನಿರರ್ಗಳವಾಗಿ ಮಾತನಾಡುತ್ತಾರೆ. ಕನ್ನಡದಲ್ಲಿ ಬರೆಯುವುದನ್ನು ರೂಢಿಸಿಕೊಂಡಿದ್ದಾರೆ. ಅದರೊಂದಿಗೆ ಕನ್ನಡಿಗರ ಹೆಮ್ಮೆಯ ಪ್ರಾತಿನಿಧಿಕ ಸಂಸ್ಥೆಯಾಗಿರುವ ಕನ್ನಡ ಸಾಹಿತ್ಯ ಪರಿಷತ್ತಿನ ಸದಸ್ಯತ್ವವನ್ನು ಪಡೆದುಕೊಂಡಿದ್ದಾರೆ.

ಅವರಿಗೆ ಕನ್ನಡ ಸಾಹಿತ್ಯ ಪರಿಷತ್ತಿನ ‘ಸಿಖ್ ಸಮುದಾಯದ ಅಲ್ಪಸಂಖ್ಯಾತರ ಪ್ರತಿನಿಧಿ’ಯಾಗಿ ಕಾರ್ಯನಿರ್ವಹಿಸಲು ಸಂತೋಷದಿಂದ ಒಪ್ಪಿಕೊಂಡಿರುವ ಹಿನ್ನೆಲೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಮಹತ್ವದ ಜವಾಬ್ದಾರಿಯನ್ನು ನೀಡಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ.ಮಹೇಶ ಜೋಶಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News