ಉಡುಪಿ; 11ರಂದು ಮಿನಿ ಉದ್ಯೋಗ ಮೇಳ

Update: 2022-08-08 16:32 GMT

ಉಡುಪಿ, ಆ.8: ಶ್ರೀ ಸಾಯಿ ಎಂಟರ್‌ಪ್ರೈಸಸ್ ಪ್ರೈ.ಲಿ., ಭಂಡಾರಿ ಪವರ್ ಲೈನ್ಸ್ ಪ್ರೈ.ಲಿ., ಆಕ್ಸಿಸ್‌ ಬ್ಯಾಂಕ್, ಬಿಎಸ್‌ಎಲ್ ಇಂಡಿಯಾನ್ ಪ್ರೈ.ಲಿ ಮತ್ತು ರಿಲಯನ್ಸ್ ಜಿಯೋ ಪ್ರೈ. ಲಿ ಕಂಪನಿಗಳ ವತಿಯಿಂದ ಆಗಸ್ಟ್ ೧೧ರಂದು ಬೆಳಗ್ಗೆ ೧೦:೩೦ಕ್ಕೆ ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಉದ್ಯೋಗ ವಿನಿಮಯ ಕಚೇರಿಯಲ್ಲಿ ಮಿನಿ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ.

ಎಸೆಸೆಲ್ಸಿ, ಪಿಯುಸಿ, ಐಟಿಐ, ಬಿಕಾಂ, ಬಿಇ ಇಂಜಿನಿಯರಿಂಗ್, ಡಿಪ್ಲೋಮ ಹಾಗೂ ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ಅಂಕಪಟ್ಟಿ, ಸ್ವ-ವಿವರವುಳ್ಳ ರೆಸ್ಯೂಮ್ ಹಾಗೂ ಆಧಾರ್‌ಕಾರ್ಡ್ ಪ್ರತಿಯೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ, ಮೊ.ನಂ: 8105618291, 8197440155, 9901472710ನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News