ದಿ ಮೈಸೂರ್ ಎಲೆಕ್ಟ್ರಿಕಲ್ ಇಂಡಸ್ಟ್ರೀಸ್ ಲಿಮೆಟೆಡ್‌ನ ನೂತನ ಅಧ್ಯಕ್ಷರಾಗಿ ಕೆ.ಉದಯಕುಮಾರ್ ಶೆಟ್ಟಿ ಪದಗ್ರಹಣ

Update: 2022-08-11 13:45 GMT

ಉಡುಪಿ, ಆ.11: ಕರ್ನಾಟಕ ಸರಕಾರ ಸ್ವಾಮ್ಯದ 77 ವರ್ಷಗಳ ಇತಿಹಾಸ ಹೊಂದಿರುವ ದಿ ಮೈಸೂರ್ ಎಲೆಕ್ಟ್ರಿಕಲ್ ಇಂಡಸ್ಟ್ರೀಸ್ ಲಿಮಿಟೆಡ್‌ನ ನೂತನ ಅಧ್ಯಕ್ಷರಾಗಿ ಹಿರಿಯ ಬಿಜೆಪಿ ನಾಯಕ ಹಾಗೂ ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ ಇಂದು ಬೆಂಗಳೂರಿನಲ್ಲಿ ಅಧಿಕಾರ ವಹಿಸಿಕೊಂಡರು. 

ಬೆಂಗಳೂರಿನ ಯಶವಂತಪುರಲ್ಲಿರುವ ಸಂಸ್ಥೆಯ ಪ್ರಧಾನ ಕಛೇರಿಯಲ್ಲಿ ರಾಜ್ಯ ಮೀನುಗಾರಿಕೆ, ಬಂದರು ಹಾಗೂ ಒಳನಾಡ ಜಲಸಾರಿಗೆ ಮತ್ತು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಅಂಗಾರ ಅವರು ಕೆ.ಉದಯ ಕುಮಾರ್ ಶೆಟ್ಟಿ ಅವರ ಪದಗ್ರಹಣ ನೆರವೇರಿಸಿ, ಅಭಿನಂದಿಸಿದರು.

ಸಂಸ್ಥೆಯ ನೂತನ ಅಧ್ಯಕ್ಷರಾಗಿ ಜವಾಬ್ದಾರಿ ವಹಿಸಿಕೊಂಡ ಕೆ.ಉದಯ ಕುಮಾರ್ ಶೆಟ್ಟಿ ಮಾತನಾಡಿ, ೭೭ ವರ್ಷಗಳ ಭವ್ಯ ಇತಿಹಾಸವುಳ್ಳ ಎಂಇಐ ಸಂಸ್ಥೆಯ ಬೆಳವಣಿಗೆಯಲ್ಲಿ ಅಧಿಕಾರಿಗಳು, ಸಿಬ್ಬಂದಿಗಳು ಸೇರಿದಂತೆ ಎಲ್ಲರ ಪರಿಶ್ರಮ ಮಹತ್ವದ್ದು. ವಹಿಸಿರುವ ಜವಾಬ್ದಾರಿಯನ್ನು ಪ್ರಾಮಾಣಿಕತೆ ಮತ್ತು ಬದ್ಧತೆಯಿಂದ ನಿಭಾಯಿಸುವ ಮೂಲಕ ಸಂಸ್ಥೆಯನ್ನು ಇನ್ನಷ್ಟು ಎತ್ತರಕ್ಕೆ ಬೆಳೆಸುವ ಆತ್ಮವಿಶ್ವಾಸವಿದೆ ಎಂದರು.

ದಿ ಮೈಸೂರ್ ಎಲೆಕ್ಟ್ರಿಕಲ್ ಇಂಡಸ್ಟ್ರೀಸ್ ಲಿಮಿಟೆಡ್ ವ್ಯವಸ್ಥಾಪಕ ನಿರ್ದೇಶಕಿ ಶೀಲಾ ಜಿ., ಪ್ರಧಾನ ವ್ಯವಸ್ಥಾಪಕ ಪ್ರಕಾಶ್ ಟಿ.ಆರ್., ಬಿಜೆಪಿ ಮಂಗಳೂರು ವಿಭಾಗ ಸಂಘಟನಾ ಪ್ರಧಾನ ಕಾರ್ಯದರ್ಶಿ ಪ್ರಸಾದ್ ಕುಮಾರ್, ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮನೋಹರ್ ಎಸ್. ಕಲ್ಮಾಡಿ, ಉಡುಪಿ ಛೇಂಬರ್ ಆಫ್ ಕಾಮರ್ಸ್ ಅಧ್ಯಕ್ಷ ಅಂಡಾರು ದೇವಿಪ್ರಸಾದ್ ಶೆಟ್ಟಿ, ಮೂಡಬಿದ್ರೆ ಶಾಸಕ ಉಮಾನಾಥ ಕೋಟ್ಯಾನ್, ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಗುರ್ಮೆ ಸುರೇಶ್ ಶೆಟ್ಟಿ, ಉಡುಪಿ ನಗರ ಸಭೆ ಅಧ್ಯಕ್ಷೆ ಸುಮಿತ್ರಾ ಆರ್. ನಾಯಕ್ ಹಾಗೂ ಪಕ್ಷದ ಇತರ ನಾಯಕರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News