ಆ.14ರಂದು ನಾರಾಯಣಗುರು ಕುರಿತ ವಿಚಾರ ಸಂಕಿರಣ
Update: 2022-08-13 14:57 GMT
ಬೈಂದೂರು, ಆ.13: ಸಿಐಟಿಯು 15ನೇ ರಾಜ್ಯ ಸಮ್ಮೇಳನದ ಸ್ವಾಗತ ಸಮಿತಿ ಉಡುಪಿ ಜಿಲ್ಲೆ ವತಿಯಿಂದ ಸಿಐಟಿಯು 15ನೆ ರಾಜ್ಯ ಸಮ್ಮೇಳನದ ಅಂಗವಾಗಿ ಸ್ವಾತಂತ್ರ್ಯ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ನಾರಾಯಣಗುರು ವಿಚಾರ ಧಾರೆ ಮತ್ತು ಕಾರ್ಮಿಕ ವರ್ಗ ಕುರಿತು ವಿಚಾರ ಸಂಕಿರಣವನ್ನು ಬೈಂದೂರು ಅಂಬೇಡ್ಕರ್ ಭವನದಲ್ಲಿ ಆ.14ರಂದು ಬೆಳಗ್ಗೆ 10ಗಂಟೆಗೆ ಹಮ್ಮಿಕೊಳ್ಳಲಾಗಿದೆ.
ಹಂಪಿ ವಿವಿಯ ನಿವೃತ್ತ ಪ್ರಾಧ್ಯಾಪಕ ಚಂದ್ರ ಪೂಜಾರಿ ವಿಚಾರ ಮಂಡನೆ ಮಾಡಲಿರುವರು. ಅಧ್ಯಕ್ಷತೆಯನ್ನು ಸ್ವಾಗತ ಸಮಿತಿಯ ಗೌರವಾಧ್ಯಕ್ಷ ಕೆ.ಶಂಕರ್ ವಹಿಸಲಿರುವರು ಎಂದು ಸ್ವಾಗತ ಸಮಿತಿ ಅಧ್ಯಕ್ಷ ಬಾಲಕೃಷ್ಣ ಶೆಟ್ಟಿ ಹಾಗೂ ಪ್ರಧಾನ ಕಾರ್ಯದರ್ಶಿ ಸುರೇಶ್ ಕಲ್ಲಾಗರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.