ಸ್ವಾತಂತ್ರ್ಯದ ಅಮೃತ ಮಹೋತ್ಸವ; ಬ್ರಹ್ಮಗಿರಿ ಸಾಯಿ ರಾಧಾ ಪ್ರೈಡ್ ಕಾಂಪ್ಲೆಕ್ಸ್‌ನಲ್ಲಿ ಸ್ವಾತಂತ್ರ್ಯ ದಿನಾಚರಣೆ
Update: 2022-08-15 12:13 IST

ಉಡುಪಿ: ಸಾಯಿ ರಾಧಾ ಪ್ರೈಡ್ ವಸತಿ ಸಮುಚ್ಚಯದ ಆವರಣದಲ್ಲಿ ಸ್ವಾತಂತ್ರ್ಯದ ಅಮೃತ ಮಹೋತ್ಸವ ಅಂಗವಾಗಿ ವರ್ಣರಂಜಿತ ಸಮಾರಂಭದಲ್ಲಿ ಸ್ವಾತಂತ್ರ್ಯ ದಿನಾಚರಣೆ ನಡೆಯಿತು.
ಸಾಯಿ ರಾಧಾ ಪ್ರೈಡ್ ಓನರ್ಸ್ ಅಸೋಸಿಯೇಶನ್ ಅಧ್ಯಕ್ಷ ಪ್ರವೀಣ್ ಭಟ್ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ, ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಬಲಿದಾನಗಳನ್ನು ವಿವರಿಸಿ, ಒಗ್ಗಟ್ಟಿಗೆ ಕರೆ ನೀಡಿದರು.
ಪ್ರಧಾನ ಕಾರ್ಯದರ್ಶಿ ರವಿರಾಜ್ ನಾಯಕ್ ಅತಿಥಿಗಳನ್ನು ಸ್ವಾಗತಿಸಿ, ವಂದಿಸಿದರು