ಅಲ್ಪಸಂಖ್ಯಾತರ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

Update: 2022-08-16 15:32 GMT

ಉಡುಪಿ : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಸರಕಾರಿ, ಅನುದಾನಿತ ಮತ್ತು ಮಾನ್ಯತೆ ಪಡೆದ ಕಾಲೇಜುಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಅಲ್ಪಸಂಖ್ಯಾತ ಸಮುದಾಯದ ಪಿಯುಸಿ, ಪದವಿ, ಸ್ನಾತಕೋತ್ತರ ಹಾಗೂ ಪಿಹೆಚ್‌ಡಿ ವಿದ್ಯಾರ್ಥಿಗಳಿಂದ ಮೆಟ್ರಿಕ್ ನಂತರದ ಹಾಗೂ ತಾಂತ್ರಿಕ ಮತ್ತು ವಿವಿಧ ವೃತ್ತಿಪರ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ಮೆರಿಟ್-ಕಂ-ಮೀನ್ಸ್ ವಿದ್ಯಾರ್ಥಿ ವೇತನಕ್ಕೆ ವೆಬ್‌ಸೈಟ್- https://scholarships.gov.in-ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಅಕ್ಟೋಬರ್ ೩೧ ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವೆಬ್‌ಸೈಟ್ - https://dom.karnataka.gov.in/udupi/public- ಸಹಾಯವಾಣಿ ಸಂಖ್ಯೆ: 8277799990 ಅಥವಾ ಉಡುಪಿ  ದೂ.ಸಂಖ್ಯೆ: 0820-2574596, ಕಾರ್ಕಳ ದೂ.ಸಂಖ್ಯೆ: 08258-231101 ಹಾಗೂ ಕುಂದಾಪುರ ದೂ.ಸಂಖ್ಯೆ: 08254-230370 ತಾಲೂಕು ಮಾಹಿತಿ ಕೇಂದ್ರಗಳನ್ನು ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News