ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆದಿದ್ದು ಕಾಂಗ್ರೆಸ್ಸಿಗರು: ಶಾಸಕ ರೇಣುಕಾಚಾರ್ಯ
ಬೆಂಗಳೂರು, ಆ. 19: ‘ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಕಾರಿನ ಮೇಲೆ ಮೊಟ್ಟೆ ಎಸೆದಿರುವುದು ಕಾಂಗ್ರೆಸ್ ಕುತಂತ್ರಿಗಳೇ ಇರಬೇಕು' ಎಂದು ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಹಾಗೂ ಹೊನ್ನಾಳಿ ಕ್ಷೇತ್ರದ ಶಾಸಕ ಎಂ.ಪಿ.ರೇಣುಕಾಚಾರ್ಯ ಪ್ರತಿಕ್ರಿಯೆ ನೀಡಿದ್ದಾರೆ.
ಶುಕ್ರವಾರ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆದಿದ್ದು ಬಿಜೆಪಿಯವರಲ್ಲ. ಕಾಂಗ್ರೆಸ್ಸಿಗರೇ ಮಾಡಿದ್ದಾರೆ. ಕಾಂಗ್ರೆಸ್ ಕುತಂತ್ರಿಗಳೇ ಅವರ ಮೇಲೆ ಮೊಟ್ಟೆ ಎಸೆದಿದ್ದಾರೆ. ಬಿಜೆಪಿ ಕಾರ್ಯಕರ್ತರು ಎಂದು ಹೇಳಿಕೊಂಡು ಪ್ರತಿಭಟನೆಯ ವೇಳೆ ಈ ಕೃತ್ಯವೆಸಗಿದ್ದಾರೆ' ಎಂದು ದೂರಿದರು.
ವಾರ್ತಾಭಾರತಿಯ ನ್ಯೂಸ್ ಅಪ್ಡೇಟ್ಸ್ ನಿಮ್ಮ ವಾಟ್ಸ್ ಆಪ್ ಗೆ ತಲುಪಬೇಕೇ ? ಈ ಲಿಂಕ್ https://bit.ly/3Cd3adz ಕ್ಲಿಕ್ ಮಾಡಿ ನಮ್ಮ ಗ್ರೂಪ್ Join ಆಗಿ.
‘ಕಾಂಗ್ರೆಸ್‍ನಲ್ಲಿಯೇ ಸಿದ್ದರಾಮಯ್ಯರ ವಿರೋಧಿಗಳಿದ್ದಾರೆ. ಅಲ್ಲದೆ, ಅವರಿಗೆ ಆಗದವರು ಆ ಪಕ್ಷದಲ್ಲೇ ಇದ್ದು, ಅವರ ಮೇಲೆ ಮೊಟ್ಟೆ ದಾಳಿ ನಡೆಸಿದ್ದಾರೆ. ಇದು ಬಿಜೆಪಿ ಕಾರ್ಯಕರ್ತರ ಕೃತ್ಯವಾಗಲು ಸಾಧ್ಯವಿಲ್ಲ' ಎಂದು ಅವರು ಇದೇ ವೇಳೆ ವಿವರಣೆ ನೀಡಿದರು.