ಉಡುಪಿ; ಕೃಷ್ಣ ವೇಷ, ನೃತ್ಯ ಸ್ಪರ್ಧೆ ವಿಜೇತರಿಗೆ ಸಚಿವ ಸುನಿಲ್ ಬಹುಮಾನ ವಿತರಣೆ

Update: 2022-08-20 14:31 GMT

ಉಡುಪಿ: ಜಿಲ್ಲಾಡಳಿತ, ಜಿಪಂ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಮೈಸೂರು ವಿಭಾಗಗಳ ವತಿಯಿಂದ ಉಡುಪಿ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಶುಕ್ರವಾರ ಆಯೋಜಿಸಲಾದ ರಾಜ್ಯ ಮಟ್ಟದ ಶ್ರೀಕೃಷ್ಣ ಜಯಂತಿ ಆಚರಣೆಯ ಸಮಾರೋಪ ಸಮಾರಂಭದಲ್ಲಿ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗಾಗಿ ನಡೆದ ನೃತ್ಯ ಸ್ಪರ್ಧೆ ಹಾಗೂ ಕೃಷ್ಣ ವೇಷ ಸ್ಪರ್ಧೆಯ ವಿಜೇತರಿಗೆ ರಾಜ್ಯ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನಿಲ್ ಕುಮಾರ ಬಹುಮಾನ ವಿತರಿಸಿದರು.

ಪರ್ಯಾಯ ಕೃಷ್ಣಾಪುರ ಮಠದ ಶ್ರೀವಿಧ್ಯಾಸಾಗರ ತೀರ್ಥರು ಅನುಗ್ರಹ ಸಂದೇಶ ನೀಡಿದರು. ಈ ಸಂದರ್ಭದಲ್ಲಿ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಉಡುಪಿ ಶಾಸಕ ಕೆ.ರಘುಪತಿ ಭಟ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ,  ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ.ರೋಶನ್ ಶೆಟ್ಟಿ, ಮತ್ತಿತರರು  ಉಪಸ್ಥಿತರಿದ್ದರು.

ನೃತ್ಯ ಸ್ಪರ್ಧೆ ವಿಜೇತರು: ಉಡುಪಿಯ ಸೃಷ್ಟಿ ನೃತ್ಯ ಕಲಾ ಕುಟೀರ ಪ್ರಥಮ, ಕಾರ್ಕಳದ ಮುನಿಯಾಲ್ ಆಯುರ್ವೇದಿಕ್ ಮೆಡಿಕಲ್ ಸೈನ್ಸ್ ಕಾಲೇಜು ದ್ವಿತೀಯ ಹಾಗೂ ಮೂಡುಬಿದಿರೆ ಆಳ್ವಾಸ್ ತೃತೀಯ ಬಹುಮಾನ ಪಡೆದವು.

ಕೃಷ್ಣ ವೇಷ ಸ್ಪರ್ಧೆ ವಿಜೇತರು:  ಮಂಗಳೂರು ನಂದಗೋಕುಲ ಶ್ವೇತಾ ಅರೆಹೊಳೆ ಪ್ರಥಮ, ಉಡುಪಿಯ ಸೃಷ್ಟಿ ನೃತ್ಯ ಕಲಾ ಕುಟೀರದ ಜಾನಕಿ ದ್ವಿತೀಯ ಹಾಗೂ ಉಡುಪಿ ಅಮ್ಮುಂಜೆಯ ಶ್ರೀಭ್ರಾಮರಿ ನಾಟ್ಯಾಲಯದ ಯಶಸ್ವಿ ತೃತೀಯ ಬಹುಮಾನ ಪಡೆದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News