ಗ್ರಾಮ ಒನ್ ಕೇಂದ್ರಗಳಲ್ಲಿ ‘ಅಭಾ’ ಸೇವೆ ಲಭ್ಯ

Update: 2022-08-23 16:11 GMT

ಉಡುಪಿ, ಆ.23: ಜಿಲ್ಲೆಯಲ್ಲಿ ಗ್ರಾಮಒನ್ ಯೋಜನೆಯನ್ನು ಅನುಷ್ಠಾನ ಗೊಳಿಸಲಾಗಿದ್ದು, ಈ ಯೋಜನೆಯಡಿ ಸಾರ್ವಜನಿಕ ಆರೋಗ್ಯದ ಮಾಹಿತಿ ಯನ್ನು ಡಿಜಿಟಲೀಕರಣಗೊಳಿಸಿ, ಒಬ್ಬ ವ್ಯಕ್ತಿಯ ಆರೋಗ್ಯದ ಮಾಹಿತಿಯನ್ನು ಒಂದೇ ಸೂರಿನಡಿ ದೊರಕಿಸಿ ಆರೋಗ್ಯದ ಸೌಲಭ್ಯಗಳು ಸುಲಭವಾಗಿ ದೊರೆಯುವಂತೆ ಮಾಡಲು ಎಬಿಹೆಚ್‌ಎ(ಅಭಾ) ಕಾರ್ಡ್ ಯೋಜನೆಯನ್ನು ಪ್ರಾರಂಭಿಸಲಾಗಿದೆ. 

ಈ ಕಾರ್ಡ್ ಹೊಂದಿರುವ ಫಲಾನುಭವಿಗಳು ಸರಕಾರಿ ಹಾಗೂ ಖಾಸಗೀ ಆಸ್ಪತ್ರೆಯಲ್ಲಿ 5 ಲಕ್ಷ ರೂ.ವರೆಗೆ ಉಚಿತವಾಗಿ ಚಿಕಿತ್ಸೆ ಪಡೆಯಬಹುದಾಗಿದೆ. ಹಾಗೂ ಚಿಕಿತ್ಸೆಯ ಮಾಹಿತಿ ಕೂಡ ದೇಶದ ಯಾವುದೇ ಭಾಗದಲ್ಲಿ ಆನ್‌ಲೈನ್ ಮೂಲಕ ಪಡೆಯಬಹುದಾಗಿದೆ. ಕಾರ್ಡ್‌ನ ನೋಂದಣಿ ಹಾಗೂ ಹೆಚ್ಚಿನ ಮಾಹಿತಿಗಾಗಿ ಹತ್ತಿರದ ಗ್ರಾಮಒನ್ ಕೇಂದ್ರಗಳನ್ನು ಸಂಪರ್ಕಿಸಬಹುದು ಎಂದು ಅಪರ ಜಿಲ್ಲಾಧಿಕಾರಿ ವೀಣಾ ಬಿ.ಎನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News