ಯುವಕ ನಾಪತ್ತೆ

Update: 2022-08-23 16:24 GMT

ಉಡುಪಿ : ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಬೈಂದೂರು ತಾಲೂಕು ಕೊಲ್ಲೂರು ಗ್ರಾಮದ ಸಲಗೇರಿ ನಿವಾಸಿ ನಾಗರಾಜ್ (37) ಎಂಬ ಯುವಕ ಆ.10ರಂದು ಬೆಳಗ್ಗೆ 8 ಗಂಟೆ ಸುಮಾರಿಗೆ ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿದ್ದಾರೆ. 

5 ಅಡಿ 7 ಇಂಚು ಎತ್ತರ, ಕೋಲು ಮುಖ, ಗೋಧಿ ಮೈಬಣ್ಣ, ಸಪೂರ ಶರೀರ ಹೊಂದಿದ್ದು, ಕನ್ನಡ, ಮರಾಠಿ ಹಾಗೂ ಮಲೆಯಾಳಿ ಭಾಷೆ ಮಾತನಾಡುತ್ತಾರೆ.

ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಕೊಲ್ಲೂರು ಪೊಲೀಸ್‌ಠಾಣೆ ದೂ.ಸಂಖ್ಯೆ: 08254-258233,  ಮೊ.ನಂ:9480805460, ಬೈಂದೂರು ವೃತ್ತ ನಿರೀಕ್ಷಕರ ಕಚೇರಿ ದೂ.ಸಂಖ್ಯೆ: 08254-251031, ಮೊ.ನಂ: 9480805434, ಕಂಟ್ರೋಲ್ ರೂಂ : 100 , 0820-2526444 ಅನ್ನು ಸಂಪರ್ಕಿಸಬಹುದು ಎಂದು ಕೊಲ್ಲೂರು ಪೊಲೀಸ್‌ಠಾಣೆಯ ಉಪನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News