ಉಡುಪಿ ಜಿಲ್ಲಾ ರಜತ ಮಹೋತ್ಸವ: ವೈಭವದ ಮೆರವಣಿಗೆ

Update: 2022-08-25 14:53 GMT

ಉಡುಪಿ, ಆ.25: ಉಡುಪಿ ಜಿಲ್ಲಾ ರಜತ ಮಹೋತ್ಸವ ಕಾರ್ಯಕ್ರಮಕ್ಕೆ ಪೂರ್ವಭಾವಿಯಾಗಿ ಇಂದು ನಗರದ ಬೋರ್ಡ್ ಹೈಸ್ಕೂಲ್‌ನಿಂದ ಅಜ್ಜರ ಕಾಡು ಕ್ರೀಡಾಂಗಣದವರೆಗೆ ಭವ್ಯ ಮೆರವಣಿಗೆ ನಡೆಯಿತು. ಮೆರವಣಿಗೆಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನಿಲ್ ಕುಮಾರ್ ಬೋರ್ಡ್ ಹೈಸ್ಕೂಲ್ ಆವರಣದಲ್ಲಿ ಚಾಲನೆ ನೀಡಿದರು.

ಒಳಕಾಡು ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳ ಹುಲಿ ಕುಣಿತದ ಮೂಲಕ ಮೆರವಣಿಗೆಗೆ ಆರಂಭಗೊಂಡಿತು. ಅಲ್ಲಿಂದ ಹೊರಟ ಮೆರವಣಿಗೆ ಕೆಎಂ ಮಾರ್ಗ, ಜೋಡುಕಟ್ಟೆ ಮಾರ್ಗವಾಗಿ ಅಜ್ಜರಕಾಡು ತಲುಪಿತು.

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಜಿಲ್ಲಾ ಉಸ್ತುವಾರಿ ಸಚಿವ ಎಸ್. ಅಂಗಾರ, ಶಾಸಕ ಕೆ.ರಘುಪತಿ ಭಟ್, ಜಿಲ್ಲಾಧಿಕಾರಿ ಕೂರ್ಮಾರಾವ್, ಜಿಪಂ ಸಿಇಒ ಪ್ರಸನ್ನ ಎಚ್., ಎಸ್ಪಿ ಹಾಕೆ ಅಕ್ಷಯ್ ಮಚ್ಚೀಂದ್ರ ಸಹಿತ ಹಲವು ಮೆರವಣಿಗೆಯಲ್ಲಿ ಹಾಜರಿದ್ದರು.

ಜಿಲ್ಲೆಯ ವಿವಿಧ ಶಾಲೆಗಳ ಸಾವಿರಾರು ಮಂದಿ ವಿದ್ಯಾರ್ಥಿಗಳು, ಶಿಕ್ಷಕರು, ಮಕ್ಕಳ ರಕ್ಷಣ ಕಲ್ಯಾಣ ಇಲಾಖೆ, ಸ್ವಸಹಾಯ ಗುಂಪು, ಅಂಗನವಾಡಿ ಕಾರ್ಯಕರ್ತೆಯರು, ಸಂಜೀವಿನಿ ಸಂಸ್ಥೆ, ಜಿಲ್ಲಾಧಿಕಾರಿ ಕಚೇರಿಯ ಸಿಬಂದಿ, ಉಡುಪಿ ನಗರಸಭೆಯ ಸಿಬಂದಿ ಸಹಿತ ಅಧಿಕಾರ ವೃಂದದವರು ಮೆರವಣಿಗೆಯಲ್ಲಿ ಭಾಗವಹಿಸಿದ್ದರು. ವಿದ್ಯಾರ್ಥಿಗಳ 2 ನಾಸಿಕ್ ಬ್ಯಾಂಡ್, ಸೇವಾದಳದ ತಂಡಗಳು ಗಮನ ಸೆಳೆದವು. ರಾಜ್ಯಪಾಲರ ಆಗಮನ ಹಿನ್ನೆಲೆಯಲ್ಲಿ ನಗರದಲ್ಲಿ ಬಿಗಿ ಪೊಲೀಸ್ ಬಂದೋಬಸ್ಥ್ ಏರ್ಪಡಿಸಲಾಗಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News