PM KISAN: ಆ.31 ರವರೆಗೆ ಇ-ಕೆವೈಸಿ ಮಾಡಿಕೊಳ್ಳಲು ಕಾಲಾವಕಾಶ

Update: 2022-08-29 14:31 GMT

ಬೆಂಗಳೂರು, ಆ.29: ಕೃಷಿ ಇಲಾಖೆಯು ಪಿ.ಎಂ.ಕಿಸಾನ್ ಯೋಜನೆಯಡಿ ನೋಂದಾಯಿಸಿದ ಫಲಾನುಭವಿಗಳು ಕಡ್ಡಾಯವಾಗಿ ಆ.31 ರೊಳಗಾಗಿ ಇ-ಕೆವೈಸಿ ಮಾಡಿಕೊಳ್ಳಲು ಸೂಚಿಸಿದೆ. ಇ-ಕೆವೈಸಿಯನ್ನು https://pmkisan.gov.in  ವೆಬ್‍ಸೈಟ್ ಮುಖಾಂತರ ಅಥವಾ ಪಿ.ಎಂ.ಕಿಸಾನ್ ಮೊಬೈಲ್ ಆ್ಯಪ್ ಮುಖಾಂತರ ಫಲಾನುಭವಿಗಳು ತಾವೇ ಮಾಡಿಕೊಳ್ಳಬಹುದು.

ಇ-ಕೆವೈಸಿಯನ್ನು ಓಟಿಪಿ ಮುಖಾಂತರ ಆಧಾರ್ ಸಂಖ್ಯೆಯೊಂದಿಗೆ ಮೊಬೈಲ್ ನಂಬರ್ ಜೋಡಣೆಯಾದ ಫಲಾನುಭವಿಗಳು https://pmkisan.gov.in  ವೆಬ್‍ಸೈಟ್‍ನ ಇ-ಕೆವೈಸಿ ಲಿಂಕ್ ಮೇಲೆ ಕ್ಲಿಕ್ಕಿಸಿ ಆಧಾರ್ ನಂಬರ್ (ಹಾಗೂ ಕ್ಯಾಪಚಾ ನಮೂದಿಸಿ ತದನಂತರ) ಇರುವ ಮೊಬೈಲ್ ಸಂಖ್ಯೆಗೆ ಬರುವ ಓಟಿಪಿ ದಾಖಲಿಸಿ ಉಚಿತವಾಗಿ ಇ-ಕೆವೈಸಿ ಮಾಡಿಕೊಳ್ಳಬಹುದು.

ಇ-ಕೆವೈಸಿಯನ್ನು ಬಯೋಮೆಟ್ರಿಕ್ ಮುಖಾಂತರ ಆಧಾರ್ ಸಂಖ್ಯೆಯೊಂದಿಗೆ ಮೊಬೈಲ್ ನಂಬರ್ ಜೋಡಣೆಯಾಗದ ರೈತರು ಅಥವಾ ಓಟಿಪಿ ಸೃಜನೆಯಾಗದ ರೈತರು ಹತ್ತಿರದ ಸಾಮಾನ್ಯ ಸೇವಾ ಕೇಂದ್ರಕ್ಕೆ (ಸಿಎಸ್‍ಸಿ) ಭೇಟಿ ನೀಡಿ ಆಧಾರ್ ಸಂಖ್ಯೆಗೆ ಜೋಡಣೆಯಾದ ಮೊಬೈಲ್ ಸಂಖ್ಯೆ ನಮೂದಿಸಿ ಬಯೋಮೆಟ್ರಿಕ್ ಉಪಕರಣದಲ್ಲಿ ಬೆರಳಚ್ಚು ನಮೂದಿಸಿ ಇ-ಕೆವೈಸಿ ಮಾಡಿಕೊಳ್ಳಬಹುದು. ಈ ಪ್ರಕ್ರಿಯೆಗಾಗಿ ಸಾಮಾನ್ಯ ಸೇವಾ ಕೇಂದ್ರದವರು ಎಲ್ಲ ಟ್ಯಾಕ್ಸ್ ಒಳಗೊಂಡಂತೆ, 15 ರೂ.ಗಳನ್ನು ಮಾತ್ರ ಪ್ರತಿ ಫಲಾನುಭವಿಯಿಂದ ಪಡೆಯಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ರೈತರು ತಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಕೃಷಿ ಇಲಾಖೆಯ ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News