6 ಮಂದಿ ಐಎಎಸ್ ಅಧಿಕಾರಿಗಳ ವರ್ಗಾವಣೆ
Update: 2022-09-08 16:59 GMT
ಬೆಂಗಳೂರು, ಸೆ.8: ರಾಜ್ಯ ಸರಕಾರವು ಆರು ಮಂದಿ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.
ಕಂದಾಯ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ-ಕಪಿಲ್ ಮೋಹನ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕಾರ್ಯದರ್ಶಿ-ಡಾ.ಮಂಜುಳಾ ಎನ್., ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಕಾರ್ಯದರ್ಶಿ-ಡಾ.ರೇಜು ಎಂ.ಟಿ., ಕಲಬುರಗಿ ಕಂದಾಯ ವಿಭಾಗದ ಪ್ರಾದೇಶಿಕ ಆಯುಕ್ತ-ಕೃಷ್ಣ ಬಾಜಪೇಯಿ, ಕೆಕೆಆರ್ ಡಿಬಿ ಉಪ ಕಾರ್ಯದರ್ಶಿ-ಆನಂದ್ ಪ್ರಕಾಶ್ ಮೀನಾ ಹಾಗೂ ರಾಜ್ಯ ರೇಷ್ಮೆ ಮಾರುಕಟ್ಟೆ ಮಂಡಳಿಯ ವ್ಯವಸ್ಥಾಪಕ ನಿರ್ದೇಶಕಿಯಾಗಿ ಡಾ.ಅನುರಾಧಾ ಕೆ.ಎನ್. ಅವರನ್ನು ವರ್ಗಾವಣೆ ಮಾಡಲಾಗಿದೆ.