ಮಸ್ಕತ್: ಕೊಚ್ಚಿಗೆ ಹೊರಟಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದ ಇಂಜಿನ್ ನಲ್ಲಿ ಬೆಂಕಿ

Update: 2022-09-14 10:00 GMT
Photo: Twitter/@shukla_tarun

ಮಸ್ಕತ್: ಕೊಚ್ಚಿಗೆ ಹೊರಟಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನ ಬುಧವಾರ ಮಸ್ಕತ್ ವಿಮಾನ ನಿಲ್ದಾಣದಲ್ಲಿ ಟೇಕ್-ಆಫ್ ಆಗುವ ಮೊದಲು ಇಂಜಿನ್ ಒಂದರಲ್ಲಿ ಬೆಂಕಿ ಕಾಣಿಸಿಕೊಂಡಿದ್ದು,ದಟ್ಟ ಹೊಗೆ ಆವರಿಸಿದೆ. ಪ್ರಯಾಣಿಕರನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ ಎಂದು NDTV ವರದಿ ಮಾಡಿದೆ.

ನಾಲ್ಕು ಪುಟ್ಟ ಕಂದಮ್ಮಗಳು ಸೇರಿದಂತೆ 145 ಪ್ರಯಾಣಿಕರನ್ನು ವಿಮಾನದಿಂದ ಕೆಳಗಿಳಿಸಲಾಯಿತು. ಅವರನ್ನು  ಟರ್ಮಿನಲ್ ಕಟ್ಟಡಕ್ಕೆ ಸ್ಥಳಾಂತರಿಸಲಾಯಿತು. ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿದ್ದು, ಯಾವುದೇ ಗಾಯಗಳ ಬಗ್ಗೆ ವರದಿಯಾಗಿಲ್ಲ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News