ಸಿದ್ದರಾಮಯ್ಯ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಕಾಣೆಯಾಗಿದ್ದ ವ್ಯಕ್ತಿ ಪತ್ತೆ
Update: 2022-09-16 17:39 GMT
ಬಾಗಲಕೋಟೆ: ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯರ 75ನೇ ಜನ್ಮದಿನದ ಅಮೃತ ಮಹೋತ್ಸವಕ್ಕೆ ತೆರಳಿದ್ದಾಗ ನಾಪತ್ತೆಯಾಗಿದ್ದ ಬಾಗಲಕೋಟೆ ಮೂಲದ ಗಿರಿಮಲ್ಲ ಖಂಡೇಕರ್ ಹುಬ್ಬಳ್ಳಿಯಲ್ಲಿ ಪೊಲೀಸರಿಗೆ ಪತ್ತೆಯಾಗಿದ್ದಾರೆ.
ಆಗಸ್ಟ್ 3ರಂದು ದಾವಣಗೆರೆಯಲ್ಲಿ ನಡೆದ ಸಿದ್ದರಾಮಯ್ಯ ಅವರ 75ನೇ ಜನ್ಮದಿನದ ಅಮೃತ ಮಹೋತ್ಸವಕ್ಕೆ ಅಡಿಹುಡಿ ಗ್ರಾಮದಿಂದ ಬಸ್ ಮೂಲಕ 50 ಜನ ತೆರಳಿದ್ದರು. ಕಾರ್ಯಕ್ರಮದ ಬಳಿಕ ಗಿರಿಮಲ್ಲ ಖಂಡೇಕರ್ ನಾಪತ್ತೆಯಾಗಿದ್ದರು. ಈ ಸಂಬಂಧ ಕುಟುಂಬಸ್ಥರು ಪೊಲೀಸರಿಗೆ ದೂರು ನೀಡಿದ್ದರು. ಇದೀಗ ಗಿರಿಮಲ್ಲ ಅವರನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ.
ಸೆಪ್ಟೆಂಬರ್11 ರಂದು ಸಿದ್ದರಾಮಯ್ಯ ಅಡಿಹುಡಿ ಗ್ರಾಮಕ್ಕೆ ಭೇಟಿ ಕೊಟ್ಟು ಗಿರಿಮಲ್ಲ ಕುಟುಂಬಸ್ಥರಿಗೆ ಧೈರ್ಯ ಹೇಳಿದ್ದರು.